ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ದೇಶದ ಮೊದಲ ‘ಸ್ಮಾಗ್‌ ಟವರ್‌’ ಉದ್ಘಾಟನೆ

ಗಾಳಿ ಶುದ್ಧಗೊಳಿಸುವ ಪ್ರಯತ್ನ
Last Updated 23 ಆಗಸ್ಟ್ 2021, 9:06 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿಯ ಗಾಳಿಯ ಗುಣಮಟ್ಟವನ್ನು ಸುಧಾರಿಸುವ ಉದ್ದೇಶದೊಂದಿಗೆ ಕನಾಟ್‌ ಪ್ರದೇಶದಲ್ಲಿ ನಿರ್ಮಿಸಲಾಗಿರುವ ದೇಶದ ಮೊದಲ ಸ್ಮಾಗ್‌ ಟವರ್‌ ಅನ್ನು (ಗಾಳಿ ಶುದ್ಧೀಕರಣ ಯಂತ್ರ) ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಸೋಮವಾರ ಉದ್ಘಾಟಿಸಿದರು.

ಈ ಟವರ್‌ ಸುಮಾರು 1 ಕಿ.ಮೀ ವ್ಯಾಪ್ತಿಯಲ್ಲಿ ಪ್ರತಿ ಸೆಕೆಂಡಿಗೆ 1,000 ಘನ ಮೀಟರ್‌ನಷ್ಟು ಗಾಳಿಯನ್ನು ಶುದ್ಧೀಕರಿಸಲಿದೆ.

‘ಈ ಗಾಳಿ ಶುದ್ಧೀಕರಣ ಯಂತ್ರವನ್ನು ಪ್ರಾಯೋಗಿಕ ಯೋಜನೆ ರೂಪದಲ್ಲಿ ಸ್ಥಾಪಿಸಲಾಗಿದೆ. ಒಂದು ತಿಂಗಳೊಳಗೆ ಆರಂಭಿಕ ಗುಣಲಕ್ಷಣಗಳು ಲಭ್ಯವಾಗಲಿದೆ. ಈ ಯೋಜನೆ ಯಶಸ್ವಿಯಾದರೆ, ದೆಹಲಿಯ ಇತರೆ ಭಾಗಗಳಲ್ಲೂ ಸ್ಮಾಗ್‌ ಟವರ್‌ ಅನ್ನು ಸ್ಥಾಪಿಸಲಾಗುವುದು’ ಎಂದು ಅವರು ಮಾಹಿತಿ ನೀಡಿದರು.

‘ಗಾಳಿ ಶುದ್ಧೀಕರಣ ಯಂತ್ರದ ಪರಿಣಾಮಕಾರಿತ್ವವನ್ನು ಪರಿಶೀಲಿಸಲು ಎರಡು ವರ್ಷಗಳ ಪ್ರಾಯೋಗಿಕ ಅಧ್ಯಯನವನ್ನು ನಡೆಸಲಾಗುವುದು’ ಎಂದು ಈ ಹಿಂದೆ ಅಧಿಕಾರಿಗಳು ಹೇಳಿದ್ದರು.

ಈ ಟವರ್‌ನ ಕಾರ್ಯಕ್ಷಮತೆ ಮೇಲೆ ನಿಗಾವಹಿಸಲು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT