ಬುಧವಾರ, ಮಾರ್ಚ್ 29, 2023
23 °C

2024ರ ಕೊನೆಯಲ್ಲಿ ಮಾನವ ಸಹಿತ ಬಾಹ್ಯಾಕಾಶ ಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತದ ಚೊಚ್ಚಲ ಮಾನವ ಸಹಿತ ಬಾಹ್ಯಾಕಾಶ ಯಾನವನ್ನು 2024ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿ ಉಡಾವಣೆ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ಪ್ರಧಾನ ಮಂತ್ರಿಗಳ ಕಚೇರಿಯ (ಪಿಎಂಒ) ರಾಜ್ಯ ಸಚಿವ ಜಿತೇಂದ್ರ ಸಿಂಗ್‌ ಬುಧವಾರ ಲೋಕಸಭೆಗೆ ತಿಳಿಸಿದ್ದಾರೆ.

ಈ ಯೋಜನೆಗೆ ಗಗನಯಾನಿಗಳನ್ನು ಗುರುತಿಸಲಾಗಿದ್ದು, ಅವರಿಗೆ ಬಾಹ್ಯಾಕಾಶ ಯೋಜನೆಗೆ ಸಂಬಂಧಿಸಿದ ನಿರ್ದಿಷ್ಟ ತರಬೇತಿಯನ್ನು ಬೆಂಗಳೂರಿನಲ್ಲಿ ನೀಡಲಾಗುತ್ತಿದೆ ಎಂದು ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಗಗನಯಾನಿಗಳ ಸುರಕ್ಷತೆಯ ಮಹತ್ವವನ್ನು ಗಮನದಲ್ಲಿ‌ಟ್ಟುಕೊಳ್ಳಲಾಗಿದೆ ಎಂದಿರುವ ಅವರು, ಈ ಕಾರಣಕ್ಕಾಗಿಯೇ ಮಾನವ ಸಹಿತ ಗಗನಯಾನಕ್ಕೂ ಮುನ್ನ ಎರಡು ಪರೀಕ್ಷಾ ವಾಹನಗಳ ಪ್ರಾತ್ಯಕ್ಷಿಕೆ ಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸಿಬ್ಬಂದಿ ರಹಿತ ‘ಗಗನಯಾನ 1’ ಯೋಜನೆ 2023ರ ಮೊದಲ ತ್ರೈಮಾಸಿಕದಲ್ಲಿ ಹಾಗೂ ಸಿಬ್ಬಂದಿ ರಹಿತ ‘ಗಗನಯಾನ 2’ ಯೋಜನೆಯನ್ನು 2024ರ ಎರಡನೇ ತ್ರೈಮಾಸಿಕದಲ್ಲಿ ಉಡಾವಣೆ ಮಾಡುವ ಗುರಿ ಹೊಂದಲಾಗಿದೆ. ಬಳಿಕ ಅಂತಿಮವಾಗಿ ಮಾನವ ಸಹಿತ ಬಾಹ್ಯಾಕಾಶ ಯಾನ ‘ಎಚ್‌1’ ಯೋಜನೆಯನ್ನು 2024ರ ನಾಲ್ಕನೇ ತ್ರೈಮಾಸಿಕದಲ್ಲಿ ಉಡಾವಣೆ ಮಾಡುವ ಯೋಜನೆಯಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು