ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಗತಿಕ ಮಾನದಂಡದ ರಾಷ್ಟ್ರೀಯ ಶಿಕ್ಷಣ ನೀತಿ: ಮೋದಿ

Last Updated 14 ಏಪ್ರಿಲ್ 2021, 8:23 IST
ಅಕ್ಷರ ಗಾತ್ರ

ಅಹಮದಾಬಾದ್‌: ‘ಭವಿಷ್ಯದ ದೃಷ್ಟಿಯಿಂದ ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ಜಾಗತಿಕ ಮಟ್ಟದ ಮಾನದಂಡಗಳನ್ನು ಹೊಂದಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.

ಭಾರತೀಯ ವಿಶ್ವವಿದ್ಯಾಲಯಗಳ ಸಂಘಟನೆಯ 95ನೇ ವಾರ್ಷಿಕ ಸಭೆ ಮತ್ತು ಕುಲಪತಿಗಳ ರಾಷ್ಟ್ರೀಯ ಸೆಮಿನಾರ್‌ನಲ್ಲಿ ಬುಧವಾರ ವಿಡಿಯೊ ಕಾನ್ಫೆರೆನ್ಸ್‌ ಮೂಲಕ ಮಾತನಾಡಿದ ಅವರು, ‘ಪ್ರಜಾಪ್ರಭುತ್ವದ ತಾಯಿ ಎಂದು ಕರೆಯಿಸಿಕೊಳ್ಳಲು ಭಾರತಕ್ಕೆ ಹೆಮ್ಮೆ ಇದೆ. ಪ್ರಜಾಪ್ರಭುತ್ವದ ಮೌಲ್ಯಗಳು ನಮ್ಮ ಸಾಮಾಜಿಕ ಜೀವನದಲ್ಲಿ ಹಾಸುಹೊಕ್ಕಿವೆ’ ಎಂದು ಹೇಳಿದರು.

‘ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮುಂದುವರಿಸಿಕೊಂಡು ಹೋಗಲು ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದಾರೆ’ ಎಂದು ಅವರು ಹೇಳಿದರು.

‘ಆತ್ಮನಿರ್ಭರ ಪಥದಲ್ಲಿ ಭಾರತ ಸಾಗುತ್ತಿರುವುದರಿಂದ ಕೌಶಲ ಹೊಂದಿದ ಯುವಕರ ಪಾತ್ರವು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ’ ಎಂದು ಈ ಸಂದರ್ಭದಲ್ಲಿ ಹೇಳಿದರು.

ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ಮುಕ್ತ ವಿಶ್ವವಿದ್ಯಾಲಯ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಕೇಂದ್ರ ಶಿಕ್ಷಣ ಸಚಿವ ರಮೇಶ್‌ ಪೊಖ್ರಿಯಾಲ್‌ ನಿಶಾಂಕ್‌, ಗುಜರಾತ್‌ ರಾಜ್ಯಪಾಲ ಆಚಾರ್ಯ ದೇವ್ರತ್‌ ಮತ್ತು ಮುಖ್ಯಮಂತ್ರಿ ವಿಜಯ್‌ ರೂಪಾನಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT