ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ 100ರ ಗಡಿ ದಾಟಿದ ಓಮೈಕ್ರಾನ್ ಪ್ರಕರಣ

Last Updated 17 ಡಿಸೆಂಬರ್ 2021, 13:06 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್‌ ಪ್ರಕರಣಗಳು 100 ದಾಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಲವ ಅಗರ್‌ವಾಲ್ ಶುಕ್ರವಾರ ತಿಳಿಸಿದ್ದಾರೆ.

11 ರಾಜ್ಯಗಳಲ್ಲಿ ಒಟ್ಟು 101 ಪ್ರಕರಣಗಳು ಈವರೆಗೆ ದೃಢಪಟ್ಟಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಹೆಚ್ಚು, ಅಂದರೆ 32 ಪ್ರಕರಣಗಳು ಈವರೆಗೆ ದೃಢಪಟ್ಟಿವೆ. ದೆಹಲಿಯಲ್ಲಿ 22 ಪ್ರಕರಣಗಳು ವರದಿಯಾಗಿವೆ.

ಉಳಿದಂತೆ ರಾಜಸ್ಥಾನದಲ್ಲಿ 17, ಕರ್ನಾಟಕದಲ್ಲಿ 8, ತೆಲಂಗಾಣದಲ್ಲಿ 8, ಗುಜರಾತ್‌ನಲ್ಲಿ 5, ಕೇರಳದಲ್ಲಿ 5, ಆಂಧ್ರ ಪ್ರದೇಶದಲ್ಲಿ 1, ಚಂಡೀಗಡದಲ್ಲಿ 1, ತಮಿಳುನಾಡಿನಲ್ಲಿ 1 ಹಾಗೂ ಪಶ್ಚಿಮ ಬಂಗಾಳದಲ್ಲಿ 1 ಪ್ರಕರಣ ದೃಢಪಟ್ಟಿದೆ.

ಕರ್ನಾಟಕದಲ್ಲಿ ಗುರುವಾರ 5 ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿದ್ದವು. ಇದರೊಂದಿಗೆ ರಾಜ್ಯ ಓಮೈಕ್ರಾನ್ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆಯಾಗಿತ್ತು.

ಬ್ರಿಟನ್‌ ಸೇರಿದಂತೆ ಯುರೋಪ್ ದೇಶಗಳಲ್ಲೂ ಓಮೈಕ್ರಾನ್ ವ್ಯಾಪಕವಾಗಿ ಹರಡುತ್ತಿದೆ. ಬ್ರಿಟನ್‌ನಲ್ಲಿ ಬುಧವಾರದ ವರೆಗೆ ಒಟ್ಟು 11,708 ಓಮೈಕ್ರಾನ್‌ ಪ್ರಕರಣಗಳು ವರದಿಯಾಗಿದ್ದವು ಎಂದು ಅಲ್ಲಿನ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT