ಝೈಡಸ್ ಕ್ಯಾಡಿಲಾ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ಕೋರಿ ಅರ್ಜಿ

ನವದೆಹಲಿ: ಭಾರತದ ಔಷಧ ಉತ್ಪಾದಕ ಕಂಪನಿ ಝೈಡಸ್ ಕ್ಯಾಡಿಲಾ, ಅಭಿವೃದ್ಧಿಪಡಿಸಿರುವ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ಕೋರಿ ಡಿಸಿಜಿಐಗೆ ಅರ್ಜಿ ಸಲ್ಲಿಸಿದೆ. ಕಂಪನಿಯು ವರ್ಷಕ್ಕೆ 12 ಕೋಟಿ ಡೋಸ್ ಲಸಿಕೆ ಉತ್ಪಾದನೆಯ ಗುರಿ ಹೊಂದಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಭಾರತದಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತುಂಗದಲ್ಲಿದ್ದ ಕೋವಿಡ್ ಪ್ರಕರಣಗಳ ಸಂಖ್ಯೆ ಈಗ ಇಳಿದಿದೆ. ಆದರೂ, ಮೂರನೇ ಅಲೆಯ ಬಗ್ಗೆ ತಜ್ಞರು ಎಚ್ಚರಿಸಿದ್ದಾರೆ. ವ್ಯಾಪಕವಾದ ಲಸಿಕೆ ಅಭಿಯಾನ ಕೈಗೊಳ್ಳುವುದು ಸಾಂಕ್ರಾಮಿಕ ರೋಗದ ವಿರುದ್ಧದ ಅತ್ಯುತ್ತಮ ರಕ್ಷಣೆಗಳಲ್ಲಿ ಒಂದಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.
ಝೈಡಸ್ ಕಂಪನಿಯ ಕೋವಿಡ್ ಲಸಿಕೆ, ಝೈಕೋವ್-ಡಿಗೆ ಅನುಮೋದನೆ ಸಿಕ್ಕರೆ ಮಾಡರ್ನಾ, ಅಸ್ಟ್ರಾಜೆನೆಕಾ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವಿಶೀಲ್ಡ್, ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಮತ್ತು ರಷ್ಯಾದ ಗಮಲೇಯ ಇನ್‌ಸ್ಟಿಟ್ಯೂಟ್ ಅಭಿವೃದ್ಧಿಪಡಿಸಿರುವ ಸ್ಪುಟ್ನಿಕ್ ವಿ ನಂತರ ಭಾರತದಲ್ಲಿ ಬಳಕೆಗೆ ಅನುಮೋದನೆ ಪಡೆದ ಐದನೇ ಲಸಿಕೆಯಾಗಲಿದೆ.
ಭಾರತದಲ್ಲಿ ಕೋವಿಡ್ -19 ಎರಡನೇ ಅಲೆಯು ಉತ್ತುಂಗದಲ್ಲಿದ್ದಾಗ ಲಸಿಕೆಯ ಪ್ರಯೋಗ ನಡೆಸಲಾಗಿದ್ದು, ಹೊಸ ರೂಪಾಂತರಿ ತಳಿಗಳ ವಿರುದ್ಧ ಅದರಲ್ಲೂ ವಿಶೇಷವಾಗಿ ಡೆಲ್ಟಾ ರೂಪಾಂತರದ ವಿರುದ್ಧ ಲಸಿಕೆಯ ಲಸಿಕೆ ಪರಿಣಾಮಕಾರಿಯಾಗಿದೆ’ಎಂದು ಝೈಡಸ್ ಕಂಪನಿ ಷೇರು ವಿನಿಮಯ ಕೇಂದ್ರಗಳಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ.. 2-17 ವರ್ಷ ವಯಸ್ಸಿನ ಮಕ್ಕಳ ಮೇಲೆ ಕೋವೊವ್ಯಾಕ್ಸ್ ಪ್ರಯೋಗಕ್ಕೆ ಸಮಿತಿ ವಿರೋಧ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.