ಬುಧವಾರ, ಜೂನ್ 23, 2021
30 °C

ಮುಖ್ಯನ್ಯಾಯಮೂರ್ತಿಗೆ ಕೋವಿಡ್‌: ರಾಜಸ್ಥಾನ ಹೈಕೋರ್ಟ್‌ ಕಲಾಪ ಮೂರು ದಿನ ಬಂದ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೈಪುರ: ರಾಜಸ್ಥಾನ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಇಂದ್ರಜಿತ್‌ ಮಹಾಂತಿ ಅವರಿಗೆ ಕೋವಿಡ್‌ ದೃಢಪಟ್ಟಿದೆ ಎನ್ನಲಾಗಿದೆ. ಹೀಗಾಗಿ ಆ. 19ರ ವರೆಗೆ ಹೈಕೋರ್ಟ್‌ನ ಕಾರ್ಯಕಲಾಪಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ಹೈಕೋರ್ಟ್‌ನ ಎಲ್ಲ ಸಿಬ್ಬಂದಿ ಕೋವಿಡ್‌ ಪರೀಕ್ಷೆಗೆ ಒಳಗಾಗಬೇಕು. ಈ ಮೂರು ದಿನಗಳ ಕಾಲ ಕೋವಿಡ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ರಿಜಿಸ್ಟ್ರಾರ್‌ ಜನರಲ್‌ ಹೊರಡಿಸಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ. ಆದರೆ, ನ್ಯಾಯಮೂರ್ತಿಗಳಿಗೆ ಕೋವಿಡ್‌ ದೃಢಪಟ್ಟಿರುವ ಅಂಶವನ್ನು ಈ ನೋಟಿಸ್‌ನಲ್ಲಿ ಉಲ್ಲೇಖಿಸಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು