ಅಂಬಾಲಾ: ರಕ್ಷಣಾ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಬಹುಪಯೋಗಿ ಐದು ರಫೇಲ್ ಯುದ್ಧವಿಮಾನಗಳನ್ನು ಗುರುವಾರ ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆ ಮಾಡಲಾಯಿತು.

ಚೀನಾ ಗಡಿಯಲ್ಲಿ ಸಂಘರ್ಷ ಸೃಷ್ಟಿಯಾಗಿರುವ ಸಂದರ್ಭದಲ್ಲಿ ಈ ಯುದ್ಧ ವಿಮಾನಗಳನ್ನು ಸೇರ್ಪಡೆ ಮಾಡಿರುವುದು ವಾಯು ಪಡೆಯ ಶಕ್ತಿಯನ್ನು ಹೆಚ್ಚಿಸಿದೆ.

ಇಲ್ಲಿನ ವಾಯು ನೆಲೆಯಲ್ಲಿ ನಡೆದ ಆಕರ್ಷಕ ಸಮಾರಂಭದಲ್ಲಿ ಸರ್ವಧರ್ಮ ಪೂಜೆ ಹಾಗೂ ಜಲಫಿರಂಗಿಗಳಿಂದ ಗೌರವ ಸಮರ್ಪಣೆ ನಂತರ ಈ ಯುದ್ಧವಿಮಾನಗಳ ಸಾಮರ್ಥ್ಯ ಪ್ರದರ್ಶನವೂ ಜರುಗಿತು.

ವಾಯುಪಡೆಯ 17 ಸ್ಕ್ವಾಡ್ರನ್ಗೆ ಈ ಯುದ್ಧವಿಮಾನಗಳನ್ನು ಸೇರ್ಪಡೆ ಮಾಡಿದ ಗಳಿಗೆಗೆ ರಕ್ಷಣಾ ಸಚಿವ ರಾಜನಾಥ್ಸಿಂಗ್, ಫ್ರಾನ್ಸ್ನ
ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲಿ,
ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ವಾಯುಪಡೆ ಮುಖ್ಯಸ್ಥ ಆರ್.ಕೆ.ಎಸ್. ಭದೌರಿಯಾ ಸಾಕ್ಷಿಯಾದರು.

ದೇಶೀಯವಾಗಿ ನಿರ್ಮಿಸಲಾಗಿರುವ ಯುದ್ಧವಿಮಾನ ತೇಜಸ್ ಹಾಗೂ ಹೆಲಿಕಾಪ್ಟರ್ ಸಾರಂಗ್ಗಳಿಂದ ಬಾನಂಗಳದಲ್ಲಿ ನಡೆದ ಕಸರತ್ತು ಗಮನ ಸೆಳೆಯಿತು.

ಫ್ರಾನ್ಸ್ನ ಡಾಸೊ ಏವಿಯೇಷನ್ ಕಂಪನಿ ತಯಾರಿಸಿರುವ ಅತ್ಯಾಧುನಿಕ ರಫೇಲ್ ಯುದ್ಧವಿಮಾನಗಳು ನಿಖರ ದಾಳಿ ಮಾಡುವ ಸಾಮರ್ಥ್ಯದಿಂದ ಗಮನಸೆಳೆದಿವೆ.

₹ 59,000 ಕೋಟಿ ವೆಚ್ಚದಲ್ಲಿ 36 ರಫೇಲ್ ಯುದ್ಧವಿಮಾನಗಳ ಖರೀದಿಗೆ ಫ್ರಾನ್ಸ್ ಜತೆ ಒಪ್ಪಂದವಾಗಿ ನಾಲ್ಕು ವರ್ಷಗಳಾಗಿದ್ದರೂ, ಮೊದಲ ಹಂತದ ಐದು ಯುದ್ಧವಿಮಾನಗಳನ್ನು ಕಳೆದ ಜುಲೈ 29ಕ್ಕೆ ಭಾರತಕ್ಕೆ ತರಲಾಗಿತ್ತು. ಮುಂದಿನ ವರ್ಷದ ಅಂತ್ಯಕ್ಕೆ ಎಲ್ಲಾ ಯುದ್ಧವಿಮಾನಗಳ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.