ಶುಕ್ರವಾರ, ಮೇ 14, 2021
25 °C

ಕೈಗಾರಿಕೆಗಳಿಗೆ ನೀಡುವ ಆಮ್ಲಜನಕವನ್ನು ಆಸ್ಪತ್ರೆಗಳಿಗೆ ಪೂರೈಸಿ: ದೆಹಲಿ ಹೈಕೋರ್ಟ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ದೆಹಲಿಯ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆಯಲ್ಲಿ ಕೊರತೆ ಉಂಟಾಗಿದೆ. ಕೈಗಾರಿಕೆಗಳಿಗೆ ನೀಡುತ್ತಿರುವ ಆಮ್ಲಜನಕವನ್ನು ಆಸ್ಪತ್ರೆಗಳಿಗೆ ನೀಡಿ’ ಎಂದು ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ ನೀಡಿದೆ.

‘ಕೈಗಾರಿಕೆಗಳು ಆಮ್ಲಜನಕಗಾಗಿ ಕಾಯಬಹುದು. ಆದರೆ ರೋಗಿಗಳಲ್ಲ. ಜೀವಗಳು ಅಪಾಯದಲ್ಲಿವೆ’ ಎಂದು ನ್ಯಾಯಮೂರ್ತಿಗಳಾದ ವಿಪಿನ್‌ ಸಂಘಿ ಮತ್ತು ರೇಖಾ ಪಲ್ಲಿ ಅವರ ‍ಪೀಠವು ಕೇಂದ್ರಕ್ಕೆ ತಿಳಿಸಿದೆ.

ಆಮ್ಲಜನಕ ಪೂರೈಕೆಯಲ್ಲಿ ಕೊರತೆ ಉಂಟಾಗಿರುವುದರಿಂದ ಗಂಗಾರಾಮ್‌ ಆಸ್ಪತ್ರೆಯ ವೈದ್ಯರು ಕೋವಿಡ್‌ ರೋಗಿಗಳಿಗೆ ಕಡಿಮೆ ಆಮ್ಲಜನಕವನ್ನು ನೀಡುವ ಪರಿಸ್ಥಿತಿ ಎದುರಾಗಿದೆ. ಆಮ್ಲಜನಕ ಪೂರೈಕೆಯನ್ನು ನಿಲ್ಲಿಸಲು ಸಾಧ್ಯವಾಗದಂತಹ ಕೈಗಾರಿಕೆಗಳು ಯಾವುವು ಎಂದು ಪೀಠವು ಕೇಂದ್ರ ಸರ್ಕಾರದ ಪರ ವಕೀಲರಾದ ಮೋನಿಕಾ ಅರೋರಾ ಅವರನ್ನು ಪ್ರಶ್ನಿಸಿತು. ಅಲ್ಲದೆ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆಯನ್ನು ಹೆಚ್ಚಿಸಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಬಗ್ಗೆ ತಿಳಿಸುವಂತೆ ಪೀಠವು ಸೂಚಿಸಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು