ಸೋಮವಾರ, ಮೇ 17, 2021
21 °C

ಪಾಕಿಸ್ತಾನ ಮೂಲದ ಐವರು ನುಸುಳುಕೋರರನ್ನು ಹೊಡೆದುರುಳಿಸಿದ ಗಡಿ ಭದ್ರತಾ ಪಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಂಜಾಬ್‌: ಇಲ್ಲಿನ ತಾರ್ನ್ ತರಣ್ ಜಿಲ್ಲೆಯ ದಾಲ್ ಗ್ರಾಮದ ಬಳಿ ಪಾಕಿಸ್ತಾನದಿಂದ ಭಾರತದೊಳಗೆ ಅಕ್ರಮವಾಗಿ ನುಸುಳಲು ಯತ್ನಿಸುತ್ತಿದ್ದ ಐವರು ನುಸುಳುಕೋರರನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಶನಿವಾರ ಹೊಡೆದುರುಳಿಸಿದೆ.

ಗುಂಡೇಟು ತಿಂದು ಸಾವಿಗೀಡಾದ ಐವರಲ್ಲಿ ಒಬ್ಬನಿಂದ ಎಕೆ ಸರಣಿಯ ರೈಫಲ್ ಅನ್ನು ಬಿಎಸ್ಎಫ್ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.

ಪಾಕಿಸ್ತಾನ ಕಡೆಯಿಂದ ಬಂದಿದ್ದ ಐವರು ಭಾರತದೊಳಗೆ ಅಕ್ರಮವಾಗಿ ನುಸುಳಲು ಯತ್ನಿಸಿದ್ದಾರೆ. ಆ ಸಂದರ್ಭದಲ್ಲಿ ಯೋಧರು ಅವರನ್ನು ತಡೆಯಲು ಮುಂದಾಗಿದ್ದಾರೆ. ಸೈನಿಕರ ಗುರಿಯಾಗಿಸಿ ನುಸುಳುಕೋರರು  ಗುಂಡಿನ ದಾಳಿ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ಪ್ರತಿ ದಾಳಿ ನಡೆಸಿರುವ ಬಿಎಸ್‌ಎಫ್‌ ಸಿಬ್ಬಂದಿ ಐವರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು