ಮಂಗಳವಾರ, ನವೆಂಬರ್ 30, 2021
22 °C

ಇನ್ಫೊಸಿಸ್‌ ನಿರ್ಮಾಣದ ವಿಶ್ರಾಮ ಸದನ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ಇಲ್ಲಿನ ಏಮ್ಸ್ ಆವರಣದಲ್ಲಿರುವ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಗಾಗಿ  (ಎನ್‌ಸಿಐ) ಇನ್ಫೊಸಿಸ್ ಫೌಂಡೇಶನ್ ನಿರ್ಮಿಸಿರುವ ‘ವಿಶ್ರಾಮ ಸದನ’ವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಉದ್ಘಾಟಿಸಿದರು. 806 ಹಾಸಿಗೆ ಸಾಮರ್ಥ್ಯದ ವಿಶ್ರಾಮ ಸದನವನ್ನು ಇನ್ಫೊಸಿಸ್ ಪ್ರತಿಷ್ಠಾನವು ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಯೋಜನೆಯ ಭಾಗವಾಗಿ ನಿರ್ಮಿಸಿದೆ. 

ಕ್ಯಾನ್ಸರ್ ರೋಗಿಗಳು ಹಾಗೂ ಅವ ಸಹಾಯಕರಿಗೆ ಇರುವುದಕ್ಕಾಗಿ ಈ ಸದನವನ್ನು ನಿರ್ಮಿಸಲಾಗಿದೆ. ಇದು ಹವಾನಿಯಂತ್ರಿತ ಸೌಕರ್ಯ ಹೊಂದಿರುವ ಸದನ. ರೋಗಿಗಳನ್ನು ನೋಡಿಕೊಳ್ಳಲು ದೀರ್ಘಕಾಲದವರೆಗೆ ಆಸ್ಪತ್ರೆಗಳಲ್ಲಿ ಉಳಿಯಬೇಕಾಗುವ ಸಹಾಯಕರಿಗೆ ಇದರಿಂದ ಅನುಕೂಲ ಆಗಲಿದೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ. 

ಸುಮಾರು ₹93 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ಸದನವು ಆಸ್ಪತ್ರೆ ಮತ್ತು ಎನ್‌ಸಿಐ ಒಪಿಡಿ ಬ್ಲಾಕ್‌ಗಳಿಗೆ ಸಮೀಪದಲ್ಲಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ, ಹರಿಯಾಣ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್ ಮತ್ತು ಇನ್ಫೊಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರು ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟನೆಯಲ್ಲಿ ಭಾ
ಗಿಯಾಗಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು