ಶನಿವಾರ, ಮೇ 21, 2022
28 °C

ಐಎನ್‌ಎಸ್ ರಣವೀರ್‌ ನೌಕೆ ದುರಂತ: ಆಕಸ್ಮಿಕ ಸಾವು ಪ್ರಕರಣ ದಾಖಲು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ನೌಕಾನೆಲೆಯಲ್ಲಿ ಭಾರತೀಯ ನೌಕಾಪಡೆಯ ಹಡಗು (ಐಎನ್‌ಎಸ್‌) ರಣವೀರ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು  ಸಿಬ್ಬಂದಿ ಸಾವಿಗೀಡಾದ ಘಟನೆಗೆ ಸಂಬಂಧಿಸಿ ಮುಂಬೈ ಪೊಲೀಸರು ಆಕಸ್ಮಿಕ ಸಾವು ಪ್ರಕರಣ ದಾಖಲಿಸಿದ್ದಾರೆ. ಈ  ಕುರಿತು ಅಧಿಕಾರಿಯೊಬ್ಬರು ಬುಧವಾರ ಮಾಹಿತಿ ನೀಡಿದ್ದಾರೆ.

ದಕ್ಷಿಣ ಮುಂಬೈನ ಕೋಲಾಬಾ ಪೊಲೀಸ್‌ ಠಾಣೆಯಲ್ಲಿ ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ ಎಂದೂ ಅವರು ಹೇಳಿದರು.

ಮೃತರನ್ನು ಅಧಿಕಾರಿಗಳಾದ ಕ್ರಿಶನ್‌ ಕುಮಾರ್‌, ಸುರೀಂದರ್‌ ಕುಮಾರ್‌ ಮತ್ತು ಎ.ಕೆ.ಸಿಂಗ್‌ ಎಂದು ಗುರುತಿಸಲಾಗಿದೆ.  ಘಟನೆಗೆ ಕಾರಣ ಪತ್ತೆ ಹಚ್ಚಲು ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ನೌಕಾಪಡೆ ಹೇಳಿದೆ. 

ಇದನ್ನೂ ಓದಿ:

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು