ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್‌ಸ್ಟಾಗ್ರಾಮ್‌ ಮಾರಕಾಸ್ತ್ರಗಳನ್ನು ಹಿಡಿದು ವಿಡಿಯೊ ಪೋಸ್ಟ್: ಯುವತಿ ಬಂಧನ

Last Updated 15 ಮಾರ್ಚ್ 2023, 15:54 IST
ಅಕ್ಷರ ಗಾತ್ರ

ಕೊಯಮತ್ತೂರು: ಇನ್‌ಸ್ಟಾಗ್ರಾಮ್‌ನಲ್ಲಿ ಮಾರಕಾಸ್ತ್ರಗಳೊಂದಿಗೆ ಪೋಸ್ ನೀಡುತ್ತಿರುವ ವಿಡಿಯೊ ಮತ್ತು ಫೋಟೊಗಳನ್ನು ಹಂಚಿಕೊಂಡಿದ್ದ 23 ವರ್ಷದ ಯುವತಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ವಿರುದುನಗರ ಜಿಲ್ಲೆಯ ವಿನೋದಿನಿ ಅಲಿಯಾಸ್ ತಮನ್ನಾ, ತಮ್ಮ ಪ್ರತಿಸ್ಪರ್ಧಿ ಗ್ಯಾಂಗ್‌ಗಳನ್ನು ಪ್ರಚೋದಿಸುವ ಸಲುವಾಗಿ ವಿಡಿಯೊಗಳನ್ನು ಹಂಚಿಕೊಂಡಿದ್ದರು.

ಸಾಮಾಜಿಕ ಜಾಲತಾಣಗಳಲ್ಲ ವಿಡಿಯೊ ಹರಿದಾಡುತ್ತಿದ್ದಂತೆ ಯುವತಿ ಪರಾರಿಯಾಗಿದ್ದು, ಪೊಲೀಸರು ಆಕೆಗಾಗಿ ಹುಡುಕಾಟ ನಡೆಸಿದ್ದಾರೆ.

ವಿನೋದಿನಿ ಮತ್ತೊಂದು ವಿಡಿಯೊವನ್ನು ಪೋಸ್ಟ್ ಮಾಡಿ, ನಾನು ಯಾವುದೇ ವಿಡಿಯೊವನ್ನು ಪೋಸ್ಟ್ ಮಾಡಿಲ್ಲ. ಮದುವೆಯಾಗಿ ನೆಲೆಸಿದ್ದೇನೆ ಎಂದು ಹೇಳಿಕೊಂಡಿದ್ದರು.

ಪೊಲೀಸರು ಸೇಲಂ ಜಿಲ್ಲೆಯ ಸಂಗಗಿರಿಯಲ್ಲಿ ವಿನೋದಿನಿಯನ್ನು ಬಂಧಿಸಲಾಗಿದೆ. ವೈದ್ಯಕೀಯ ತಪಾಸಣೆಯ ನಂತರ ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಗಾಂಜಾ ಪ್ರಕರಣದಲ್ಲಿ ವಿನೋದಿನಿಯನ್ನು ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT