ತೆಲಂಗಾಣ: ಶಿವಾಜಿ ಪ್ರತಿಮೆ ಸ್ಥಾಪನೆ ವಿಚಾರ - ಕಲ್ಲು ತೂರಾಟ, ನಿಷೇಧಾಜ್ಞೆ ಜಾರಿ

ಹೈದರಾಬಾದ್: ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಬೋಧನ್ ಪಟ್ಟಣದಲ್ಲಿ ಭಾನುವಾರ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪನೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರತಿಭಟನೆ ನಡೆಸಿದ ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಬಳಿಕ ಗುಂಪನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದ ಪೊಲೀಸರು, ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದರು.
ಇದನ್ನೂ ಓದಿ: ಭಾರತ – ಬಾಂಗ್ಲಾ ಗಡಿ ಬಳಿ ಡ್ರೋನ್ ಪತ್ತೆ, ಬಿಎಸ್ಎಫ್ ತನಿಖೆ
ಮುಂಜಾಗ್ರತಾ ಕ್ರಮವಾಗಿ ಪ್ರದೇಶದಲ್ಲಿ ನಿಷೇಧಾಜ್ಞೆ ಘೋಷಿಸಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಕಲ್ಲು ತೂರಾಟದಲ್ಲಿ ಓರ್ವ ಕಾನ್‌ಸ್ಟೇಬಲ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರ ಪ್ರಕಾರ, ಒಂದು ಗುಂಪು ಪ್ರತಿಮೆ ಸ್ಥಾಪಿಸಿದಾಗ ಮತ್ತೊಂದು ಗುಂಪು ಇದನ್ನು ವಿರೋಧಿಸಿತ್ತು. ಬಳಿಕ ಕಲ್ಲು ತೂರಾಟ ನಡೆಯಿತು. ಶಿವಾಜಿ ಪ್ರತಿಮೆ ಸ್ಥಾಪನೆಗೆ ಅನುಮತಿ ಪಡೆದಿರಲಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.