ಶುಕ್ರವಾರ, ಡಿಸೆಂಬರ್ 2, 2022
21 °C

ಮಹಾರಾಷ್ಟ್ರ ಸಿಎಂ ಶಿಂದೆಗೆ ಜೀವ ಬೆದರಿಕೆ ಇರುವ ಬಗ್ಗೆ ಮಾಹಿತಿ: ಭದ್ರತೆ ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರಿಗೆ ಜೀವ ಬೆದರಿಕೆ ಇರುವ ಖಚಿತ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಅವರಿಗೆ ನೀಡಲಾಗಿರುವ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

‘ಮುಖ್ಯಮಂತ್ರಿ ಶಿಂದೆ ಅವರಿಗೆ ಜೀವ ಬೆದರಿಕೆ ಇರುವ ಖಚಿತ ಮಾಹಿತಿ ರಾಜ್ಯ ಗುಪ್ತಚರ ಇಲಾಖೆಗೆ (ಎಸ್‌ಐಡಿ) ಶನಿವಾರ ಸಂಜೆ ಲಭ್ಯವಾಗಿತ್ತು. ಹೀಗಾಗಿ ಅವರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ’ ಎಂದು ಎಸ್‌ಐಡಿ ಆಯುಕ್ತ ಆಶುತೋಷ್‌ ದುಂಬ್ರೆ ತಿಳಿಸಿದ್ದಾರೆ.

ಝಡ್‌ ಪ್ಲಸ್‌ ಭದ್ರತೆಯ ಜೊತೆಗೆ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ. ಠಾಣೆಯಲ್ಲಿರುವ ಶಿಂದೆ ಅವರ ಖಾಸಗಿ ನಿವಾಸ ಮತ್ತು ಮುಂಬೈನಲ್ಲಿರುವ ಅಧಿಕೃತ ನಿವಾಸಕ್ಕೆ ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು