ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳ ಬೆಳವಣಿಗೆ: ಆ ದೇಶದ ಆಂತರಿಕ ವಿಚಾರ ಎಂದ ಭಾರತೀಯ ವಿದೇಶಾಂಗ ಸಚಿವಾಲಯ

Last Updated 26 ಮೇ 2021, 12:10 IST
ಅಕ್ಷರ ಗಾತ್ರ

ನವದೆಹಲಿ: ನೇಪಾಳದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಆ ದೇಶದ ಆಂತರಿಕ ವಿಚಾರ. ಅದನ್ನು ಅವರು ಆಂತರಿಕವಾಗಿಯೇ ಬಗೆಹರಿಸಿಕೊಳ್ಳುತ್ತಾರೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ನೇಪಾಳದ ರಾಜಕೀಯ ಬೆಳವಣಿಗೆಗಳ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ನೇಪಾಳದ ರಾಜಕೀಯ ಬೆಳವಣಿಗೆಯನ್ನು ನಾವು ಗಮನಿಸುತ್ತಿದ್ದೇವೆ. ಆದರೆ, ಇದು ಅವರ ಆಂತರಿಕ ವಿಷಯ. ಅದನ್ನು ಅವರೇ ಬಗೆಹರಿಸಿಕೊಳ್ಳುತ್ತಾರೆ. ನೇಪಾಳ ನಮ್ಮ ಮಿತ್ರ ರಾಷ್ಟ್ರ. ಅಲ್ಲಿ ಶಾಂತಿ ಸ್ಥಾಪನೆ, ಸ್ಥಿರತೆ ಮತ್ತು ಅಭಿವೃದ್ಧಿ ವಿಷಯದಲ್ಲಿ ಭಾರತದ ಬೆಂಬಲ ಸದಾ ಇರುತ್ತದೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ನೇಪಾಳದ ರಾಜಕೀಯದಲ್ಲಿ ಪ್ರಕ್ಷುಬ್ಧತೆ ತಲೆದೂರಿದೆ. ಪ್ರಧಾನಿ ಕೆಪಿ ಶರ್ಮಾ ಓಲಿ ಮತ್ತು ವಿಪಕ್ಷ ನಾಯಕ ಶೇರ್‌ ಬಹದ್ದೂರ್‌ ದುಬೆ ಇಬ್ಬರೂ ಬಹುಮತ ಸಾಬೀತುಪಡಿಸಲು ವಿಫಲರಾದ ಕಾರಣ ನೇಪಾಳ ಅಧ್ಯಕ್ಷೆ ಬಿದ್ಯಾ ದೇವಿ ಬಂಡಾರಿ ಸಂಸತ್‌ ಅನ್ನು ವಿಸರ್ಜಿಸಿದ್ದಾರೆ. ನವೆಂಬರ್‌ನಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲು ಅಧ್ಯಕ್ಷರು ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT