ಭಾನುವಾರ, ನವೆಂಬರ್ 28, 2021
21 °C

ಮುಂಬೈನಲ್ಲಿ ಕಾಣಿಸಿಕೊಂಡ ಘೋಷಿತ ಅಪರಾಧಿ ಪರಮ್‌ ಬೀರ್ ಸಿಂಗ್‌

PTI Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮುಂಬೈ ಕೋರ್ಟ್‌ನಿಂದ ಘೋಷಿತ ಅಪರಾಧಿ ಎಂದು ಕರೆಸಿಕೊಂಡಿರುವ ಮಾಜಿ ಪೊಲೀಸ್‌ ಆಯುಕ್ತ ಪರಮ್‌ ಬೀರ್‌ ಸಿಂಗ್‌ ಅವರು ಗುರುವಾರ ಮುಂಬೈ ನಗರದಲ್ಲಿ ಕಾಣಿಸಿಕೊಂಡರು.

ಮಹಾರಾಷ್ಟ್ರದಲ್ಲಿ ಸುಲಿಗೆ ಪ್ರಕರಣದಲ್ಲಿ ಹಲವು ಆರೋಪಗಳನ್ನು ಎದುರಿಸುತ್ತಿರುವ ಅವರು ತಾವು ಚಂಡೀಗಡದಲ್ಲಿ ಇದ್ದುದ್ದಾಗಿ ಹೇಳಿದರು. ನ್ಯಾಯಾಲಯದ ನಿರ್ದೇಶನದಂತೆ  ತನಿಖೆಗೆ ಸಹಕರಿಸುವುದಾಗಿಯೂ ತಿಳಿಸಿದರು. 

ಮುಂಬೈ ಪೊಲೀಸ್‌ ಆಯುಕ್ತ ಹುದ್ದೆಯಿಂದ ವರ್ಗಾವಣೆಯಾದ ಮತ್ತು ಆಗಿನ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ನಂತರ ಮೇ ತಿಂಗಳಿನಿಂದ ಅವರು ಕೆಲಸಕ್ಕೆ ಹಾಜರಾಗಿಲ್ಲ.

ಬಂಧನದಿಂದ ರಕ್ಷಣೆ ಕೋರಿ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಉದ್ಯಮಿ ಮುಖೇಶ್‌ ಅಂಬಾನಿ ಅವರ ಮನೆ ಬಳಿ ನಿಲ್ಲಿಸಿದ್ದ ಎಸ್‌ಯುವಿಯಲ್ಲಿ ಸ್ಫೋಟಕ ಸಾಮಗ್ರಿಗಳು ಪತ್ತೆಯಾದ ಬಳಿಕ ಮುಂಬೈ ಪೊಲೀಸ್‌ ಆಧಿಕಾರಿ ಸಚಿನ್‌ ವಾಜೆ ಅವರನ್ನು ಬಂಧಿಸಲಾಗಿತ್ತು. ಅನಂತರ ಪರಮ್‌ ಬೀರ್‌ ಸಿಂಗ್ ಅವರನ್ನು ವರ್ಗಾವಣೆ ಮಾಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು