ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ನಾಯಕರಿಗೆ ಲೀಗಲ್‌ ನೋಟಿಸ್: ಕ್ಷಮೆಯಾಚನೆಗೆ ಸ್ಮೃತಿ ಆಗ್ರಹ

Last Updated 24 ಜುಲೈ 2022, 13:44 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ತಮ್ಮ ಮಗಳ ವಿರುದ್ಧದ ಆಧಾರ ರಹಿತ ಮತ್ತು ಸುಳ್ಳು ಆರೋಪಗಳಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ ನಾಯಕರಾದ ಜೈರಾಂ ರಮೇಶ್‌ ಮತ್ತು ಪವನ್‌ ಖೇರಾ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಲೀಗಲ್‌ ನೋಟಿಸ್‌ ಕಳುಹಿಸಿದ್ದಾರೆ.

ಸ್ಮೃತಿ ಇರಾನಿ ಅವರ ಮಗಳು ಝೋಯಿಶ್‌ ಇರಾನಿ ಅವರು ಮೃತರೊಬ್ಬರ ಹೆಸರಿನಲ್ಲಿ ಗೋವಾದಲ್ಲಿ ಬಾರ್‌ ನಡೆಸುತ್ತಿದ್ದಾರೆ. ಹೀಗಾಗಿ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಪ್ರಧಾನಿ ಮೋದಿ ಅವರನ್ನು ಕಾಂಗ್ರೆಸ್‌ ನಾಯಕರು ಆಗ್ರಹಿಸಿದ ಬೆನ್ನಲ್ಲೇ ಈ ಕ್ರಮ ಕೈಗೊಂಡಿದ್ದಾರೆ.

ಆರೋಪಗಳನ್ನು ಬೇಷರತ್‌ ವಾಪಸ್‌ ಪಡೆದು, ಕ್ಷಮೆಯಾಚಿಸದಿದ್ದಲ್ಲಿ ಅವರ ವಿರುದ್ಧ ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಕಾಂಗ್ರೆಸ್ ನಾಯಕಿ ನೆಟ್ಟ ಡಿಸೋಜಾ ಮತ್ತು ಕಾಂಗ್ರೆಸ್ ಪಕ್ಷಕ್ಕೂ ನೋಟಿಸ್ ಕಳುಹಿಸಲಾಗಿದೆ.ಝೋಯಿಶ್‌ ಇರಾನಿಗೆ ಒಡೆತನದಲ್ಲಿದೆ ಎನ್ನಲಾದ ರೆಸ್ಟೋರೆಂಟ್‌ ಹೊರಗೆ ಭಾನುವಾರ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT