ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಆರ್‌ಸಿಟಿಸಿ ಹಗರಣ: ಬಿಹಾರ ಡಿಸಿಎಂ ಜಾಮೀನು ರದ್ದತಿಗೆ ಸಿಬಿಐ ಮನವಿ

Last Updated 17 ಸೆಪ್ಟೆಂಬರ್ 2022, 14:42 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ರೈಲ್ವೆ ಕೇಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮಕ್ಕೆ (ಐಆರ್‌ಸಿಟಿಸಿ) ಸಂಬಂಧಿಸಿದ ಹಗರಣದಲ್ಲಿ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಸಿಬಿಐ ಶನಿವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.

ತನಿಖಾ ಸಂಸ್ಥೆ ಸಲ್ಲಿಸಿದ ಅರ್ಜಿ ಆಧರಿಸಿ ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯಲ್‌ ಅವರು ಯಾದವ್‌ ಅವರಿಗೆ ನೋಟಿಸ್ ಜಾರಿಗೊಳಿಸಿ, ಸೆ.28ರೊಳಗೆ ಉತ್ತರ ನೀಡುವಂತೆ ತಿಳಿಸಿದ್ದಾರೆ.

ಖಾಸಗಿ ಸಂಸ್ಥೆಗೆ ಎರಡು ಐಆರ್‌ಸಿಟಿಸಿ ಹೋಟೆಲ್‌ಗಳ ಕಾರ್ಯಾಚರಣೆಯ ಗುತ್ತಿಗೆ ನೀಡುವಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ವಿಚಾರದಲ್ಲಿ ಅವರ ವಿರುದ್ಧ ನೀಡಲಾದ ಸಮನ್ಸ್‌ಗೆ ಅನುಗುಣವಾಗಿ ನ್ಯಾಯಾಲಯ 2018 ರಲ್ಲಿ ಜಾಮೀನು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT