ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರ ಪ್ರದೇಶ: ಐರ್ಲೆಂಡ್‌ನಿಂದ ಬಂದಿದ್ದ ವ್ಯಕ್ತಿಯಲ್ಲಿ ಓಮೈಕ್ರಾನ್

Last Updated 12 ಡಿಸೆಂಬರ್ 2021, 13:54 IST
ಅಕ್ಷರ ಗಾತ್ರ

ಹೈದರಾಬಾದ್: ಐರ್ಲೆಂಡ್‌ನಿಂದ ಮುಂಬೈ ವಿಮಾನ ನಿಲ್ದಾಣದ ಮೂಲಕ ಬಂದ 34 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್ ಪತ್ತೆಯಾಗಿತ್ತು. ಆದರೆ, ಇದೀಗ ಅವರು ಗುಣಮುಖರಾಗಿದ್ದಾರೆ ಎಂದು ಆಂಧ್ರ ಪ್ರದೇಶ ಆರೋಗ್ಯ ಇಲಾಖೆ ತಿಳಿಸಿದೆ.

ಆಂಧ್ರ ಪ್ರದೇಶದಲ್ಲಿ ವರದಿಯಾದ ಮೊದಲ ಓಮೈಕ್ರಾನ್ ಪ್ರಕರಣ ಇದಾಗಿದೆ.

ಸೋಂಕಿತ ವ್ಯಕ್ತಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲೇ ಆರ್‌ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದರೆ ಆಗ ವರದಿ ನೆಗೆಟಿವ್ ಬಂದಿತ್ತು. ಹೀಗಾಗಿ ಅವರಿಗೆ ಪ್ರಯಾಣಿಸಲು ಅನುಮತಿ ನೀಡಲಾಗಿತ್ತು ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ನವೆಂಬರ್ 27ರಂದು ಅವರು ವಿಶಾಖಪಟ್ಟಣಕ್ಕೆ ಬಂದ್ದಿದ್ದರು. ಬಳಿಕ ವಿಜಯನಗರಂನಲ್ಲಿ ಮತ್ತೆ ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು, ಕೋವಿಡ್ ಪಾಸಿಟಿವ್ ಬಂದಿತ್ತು. ಹೀಗಾಗಿ ಅವರ ಮಾದರಿಯನ್ನು ಜೀನೋಮ್ ಸೀಕ್ವೆನ್ಸಿಂಗ್‌ಗಾಗಿ ಕಳುಹಿಸಿಕೊಡಲಾಗಿತ್ತು. ಬಳಿಕ ವರದಿ ಪಾಸಿಟಿವ್ ಬಂದಿತ್ತು ಎಂದು ಆಂಧ್ರ ಪ್ರದೇಶದ ಸಾರ್ವಜನಿಕ ಆರೋಗ್ಯ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

ಆದರೆ ಅವರಲ್ಲಿ ಸೋಂಕಿನ ಲಕ್ಷಣಗಳಿರಲಿಲ್ಲ. ಅವರನ್ನು ಶುಕ್ರವಾರ ಮತ್ತೆ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ನೆಗೆಟಿವ್ ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದ ನಾಗ್ಪುರದ ವ್ಯಕ್ತಿಯೊಬ್ಬರಲ್ಲಿ ಹಾಗೂ ಕರ್ನಾಟಕದ ವ್ಯಕ್ತಿಯೊಬ್ಬರಲ್ಲಿ ಭಾನುವಾರ ಓಮೈಕ್ರಾನ್ ದೃಢಪಟ್ಟಿದೆ. ಇದರೊಂದಿಗೆ ಕರ್ನಾಟಕದಲ್ಲಿ ಓಮೈಕ್ರಾನ್ ಪ್ರಕರಣಗಳ ಸಂಖ್ಯೆ 3ಕ್ಕೆ ಏರಿಕೆಯಾಗಿದ್ದರೆ ಮಹಾರಾಷ್ಟ್ರದಲ್ಲಿ 18ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT