ಮಂಗಳವಾರ, ಏಪ್ರಿಲ್ 20, 2021
32 °C

ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ ಮೋದಿ, ಶಾ ಕಾರ್ಯತಂತ್ರವೇ: ಮಮತಾ ಪ್ರಶ್ನೆ

ಡೆಕ್ಕನ್ ಹೆರಾಲ್ಡ್ Updated:

ಅಕ್ಷರ ಗಾತ್ರ : | |

Mamata Banerjee

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಮತದಾನ ನಿಗದಿಪಡಿಸಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ಮೇರೆಗೆ ಈ ತೀರ್ಮಾನ ಕೈಗೊಳ್ಳಲಾಗಿದೆಯೇ ಎಂದು ಅವರು ಕೇಳಿದ್ದಾರೆ.

ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಪ್ರಚಾರ ನಡೆಸಲು ಮೋದಿ ಮತ್ತು ಶಾ ಅವರಿಗೆ ಸಾಕಷ್ಟು ಸಮಯವಿದೆಯೇ ಎಂದು ನೋಡಿಕೊಂಡು ರಾಜ್ಯದ ಜಿಲ್ಲೆಗಳಲ್ಲಿ ಚುನಾವಣೆ ನಿಗದಿಪಡಿಸಲು ಅವಕಾಶವಿದೆಯೇ ಎಂದೂ ಅವರು ಪ್ರಶ್ನಿಸಿದ್ದಾರೆ.

ಓದಿ: 

‘ಪಶ್ಚಿಮ ಬಂಗಾಳದಲ್ಲಿ ಹಲವು ಹಂತಗಳಲ್ಲಿ ಮತ್ತು ಇತರ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ (ಅಸ್ಸಾಂನಲ್ಲಿ ಮೂರು ಹಂತಗಳಿವೆ) ಮತದಾನ ಏಕೆ ನಿಗದಿಪಡಿಸಲಾಗಿದೆ. ಚುನಾವಣಾ ಆಯೋಗವೇ ಜನರಿಗೆ ನ್ಯಾಯ ಒದಗಿಸದಿದ್ದರೆ ಅವರೆಲ್ಲಿ ಹೋಗಬೇಕು’ ಎಂದು ಮಮತಾ ಪ್ರಶ್ನಿಸಿದ್ದಾರೆ.

ಬಂಗಾಳದಲ್ಲಿ 294 ಕ್ಷೇತ್ರಗಳಿವೆ. ಎಂಟು ಹಂತಗಳ ಮತದಾನ ಯಾಕೆ ಬೇಕು? ಇದು ಯಾರ ಹಿತಾಸಕ್ತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಬಯಸಿದಂತೆ ಚುನಾವಣಾ ದಿನಾಂಕ ನಿಗದಿಪಡಿಸಲಾಗಿದೆ ಎಂಬ ಮಾಹಿತಿ ನನ್ನ ಕೆಲವು ಮೂಲಗಳಿಂದ ದೊರೆತಿದೆ. ಪ್ರಧಾನಿ ಮತ್ತು ಗೃಹ ಸಚಿವರು ಪಶ್ಚಿಮ ಬಂಗಾಳದಲ್ಲಿ ತಮ್ಮ ಅಧಿಕಾರ ದುರುಪಯೋಗ ಮಾಡದಂತೆ ನೋಡಿಕೊಳ್ಳಿ ಎಂದು ಚುನಾವಣಾ ಆಯೋಗವನ್ನು ಉದ್ದೇಶಿಸಿ ಮಮತಾ ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು