ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸ್‌ ಉಗ್ರ ಚಟುವಟಿಕೆ: ಕರ್ನಾಟಕದ ಭಟ್ಕಳ ಸೇರಿ 6 ರಾಜ್ಯಗಳ 13 ಸ್ಥಳಗಳಲ್ಲಿ ಶೋಧ

Last Updated 31 ಜುಲೈ 2022, 8:29 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಾನುವಾರ ಆರು ರಾಜ್ಯಗಳ 13 ಸ್ಥಳಗಳಲ್ಲಿ ಐಎಸ್ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಶಂಕಿತರ ಮೇಲೆ ದಾಳಿ ನಡೆಸಿದೆ.

ಮಧ್ಯಪ್ರದೇಶದ ಭೋಪಾಲ್ ಮತ್ತು ರೈಸನ್, ಗುಜರಾತ್‌ನ ಭರೂಚ್, ಸೂರತ್, ನವಸಾರಿ ಮತ್ತು ಅಹಮದಾಬಾದ್, ಬಿಹಾರದ ಅರಾರಿಯಾ ಜಿಲ್ಲೆ, ಕರ್ನಾಟಕದ ಭಟ್ಕಳ ಮತ್ತು ತುಮಕೂರು, ಮಹಾರಾಷ್ಟ್ರದ ಕೊಲ್ಹಾಪುರ ಮತ್ತು ನಾಂದೇಡ್ ಜಿಲ್ಲೆಗಳು ಮತ್ತು ಉತ್ತರ ಪ್ರದೇಶದ ದೇವಬಂದ್ ಜಿಲ್ಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ.

ಜೂನ್ 25 ರಂದು ಎನ್‌ಐಎ ಐಪಿಸಿಯ ಸೆಕ್ಷನ್ 153 ಎ ಮತ್ತು 153 ಬಿ ಮತ್ತು ಸೆಕ್ಷನ್ 18, 18 ಬಿ, 38, 39 ಮತ್ತು 40ರ ಯುಎ (ಪಿ) ಕಾಯಿದೆ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು.

ಶೋಧಕಾರ್ಯಾಚರಣೆ ವೇಳೆ ದಾಖಲೆಗಳು, ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್‌ಐಎ ಹೇಳಿಕೆಯಲ್ಲಿ ತಿಳಿಸಿದೆ. ತನಿಖೆ ನಡೆಯುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT