ಮಂಗಳವಾರ, ಜೂನ್ 15, 2021
23 °C

ಶಾಲೆಗಳನ್ನು ಕೋವಿಡ್ ಕೇರ್ ಕೇಂದ್ರಗಳಾಗಿ ಪರಿವರ್ತಿಸಿದ ಇಶಾ ಫೌಂಡೇಶನ್

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಕೊಯಮತ್ತೂರು: ತಮಿಳುನಾಡಿನ ಎಂಟು ಜಿಲ್ಲೆಗಳಲ್ಲಿ ನಡೆಸುತ್ತಿರುವ ಇಶಾ ವಿದ್ಯಾ ಶಾಲೆಗಳನ್ನು ಕೋವಿಡ್ ಕೇರ್ ಕೇಂದ್ರಗಳಾಗಿ ಬಳಸಲು ಇಶಾ ಫೌಂಡೇಶನ್ ಸಂಸ್ಥೆ ತಮಿಳುನಾಡು ಸರ್ಕಾರಕ್ಕೆ ಅವಕಾಶ ಮಾಡಿಕೊಟ್ಟಿದೆ.

ಕೊಯಮತ್ತೂರು, ಈರೋಡ್, ಸೇಲಂ, ನಾಗರ್‌ಕೋಯಿಲ್, ತೂತುಕುಡಿ, ವಿಲ್ಲುಪುರಂ, ಕಡಲೂರು ಮತ್ತು ಧರ್ಮಪುರಿ ಜಿಲ್ಲೆಗಳಲ್ಲಿ ಇಶಾ ಫೌಡೇಶನ್ ಶಾಲೆಗಳಿವೆ.

‘ನಾವು 990 ಹಾಸಿಗೆಯ ಸಾಮರ್ಥ್ಯ ಹೊಂದಿರುವ ಕೋವಿಡ್ ಕೇರ್ ಕೇಂದ್ರಗಳಾಗಿ ಪರಿವರ್ತಿಸಿರುವ ಇಶಾ ಶಾಲೆಗಳನ್ನು ತಮಿಳುನಾಡು ಸರ್ಕಾರಕ್ಕೆ ನೀಡುತ್ತಿದ್ದೇವೆ. ಈ ಸವಾಲನ್ನು ಜಯಿಸಲು ಆಡಳಿತ ವರ್ಗದ ಕೈಗಳನ್ನು ಬಲಪಡಿಸುವಲ್ಲಿ ಸಮುದಾಯವನ್ನು ಒಗ್ಗೂಡಿಸಬೇಕೆಂದು ನಾನು ಮನವಿ ಮಾಡುತ್ತೇನೆ’ ಎಂದು ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಟ್ವೀಟ್ ಮಾಡಿದ್ದಾರೆ.

ನಗರದ ಹೊರವಲಯದಲ್ಲಿರುವ ತೋಂಡಮುತ್ತೂರ್‌ನ ಯೋಗ ಕೇಂದ್ರದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಈಶಾಸ್ ಸಮುದಾಯದ ಅಭಿವೃದ್ಧಿ ಕೆಲಸಗಳಿಗೆ ಪ್ರತಿಷ್ಠಾನವು ₹ 11.54 ಕೋಟಿ ಖರ್ಷು ಮಾಡಿದೆ. ಜಗ್ಗಿ ವಾಸುದೇವ್ ಅವರ ಮೂರು ವರ್ಣಚಿತ್ರಗಳನ್ನು ಆನ್‌ಲೈನ್ ಹರಾಜಿನ ಮೂಲಕ ಮಾರಾಟ ಮಾಡಿ ಈ ಹಣವನ್ನು ಸಂಗ್ರಹಿಸಲಾಗಿದೆ ಎಂದು ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.

ಮುಂಚೂಣಿಯ ಆರೋಗ್ಯ ಕಾರ್ಯಕರ್ತರಿಗೆ ಫೇಸ್ ಶೀಲ್ಡ್, ಸ್ಯಾನಿಟೈಜರ್‌, ಪಿಪಿಇ ಕಿಟ್‌ಗಳ ವಿತರಣೆ ಮತ್ತು ಸ್ಥಳೀಯ ಕೋವಿಡ್ ಕೇರ್ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಸಜ್ಜುಗೊಳಿಸುವುದು ಸೇರಿದಂತೆ ವೈದ್ಯಕೀಯ ಮೂಲಸೌಕರ್ಯ ಸರಬರಾಜು ಮಾಡುವ ಮೂಲಕ ಸ್ಥಳೀಯ ಆಡಳಿತವನ್ನು ಇಶಾ ಬೆಂಬಲಿಸಿದೆ ಎಂದು ಸಂಸ್ಥೆ ತಿಳಿಸಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು