ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು-ಕಾಶ್ಮೀರ: ಇಸ್ಲಾಮಿಕ್‌ ಸ್ಟೇಟ್‌ ಉಗ್ರನ‌ ಬಂಧನ

Last Updated 5 ಏಪ್ರಿಲ್ 2021, 2:59 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಸಂಚು ರೂಪಿಸಿದ್ದ ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಉಗ್ರ ಸಂಘಟನೆಯ ಕಮಾಂಡರ್‌ನನ್ನು ಭಾನುವಾರ ಬಂಧಿಸಲಾಗಿದೆ.

ಈ ವಿಚಾರವಾಗಿ ಮಾಹಿತಿ ನೀಡಿರುವ ಜಮ್ಮು ವಲಯದ ಪೊಲೀಸ್ ಮುಖ್ಯಸ್ಥ ಮುಖೇಶ್ ಸಿಂಗ್, 'ದಕ್ಷಿಣ ಕಾಶ್ಮೀರದ ಕುಲ್‌ಗಾಂ ಜಿಲ್ಲೆಯ ಯಾರಿಪೋರಾ ಗ್ರಾಮದ ನಿವಾಸಿ ಉಮೈರ್ ಅಲಿಯಾಸ್ ಅಬ್ದುಲ್ಲಾನನ್ನು ಬಂಧಿಸಲಾಗಿದೆ. ಉಗ್ರನು ಇಸ್ಲಾಮಿಕ್‌ ಸ್ಟೇಟ್‌ ಸಂಘಟನೆಗೆ ಸೇರಿದವನಾಗಿದ್ದು, ಕಾಶ್ಮೀರ ಪ್ರಾಂತ್ಯದ ಕಮಾಂಡರ್‌ ಆಗಿ ನೇಮಕಗೊಂಡಿದ್ದನು' ಎಂದು ತಿಳಿಸಿದ್ದಾರೆ.

ಬಂಧಿತ ಉಗ್ರನಿಂದ ಶಸ್ತ್ರಾಸ್ತ್ರ ಸೇರಿದಂತೆ ₹ 1.13 ಲಕ್ಷ ಹಣವನ್ನು ವಶಪಡಿಸಿಕೊಳ್ಳಾಗಿದೆ. ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಉಗ್ರನು ಸಂಚು ರೂಪಿಸಿದ್ದನೆಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT