ಭಾನುವಾರ, ನವೆಂಬರ್ 28, 2021
19 °C

ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಇಸ್ರೇಲ್‌ ರಾಯಭಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘವು ಆಯೋಜಿಸಿದ್ದ ವಿಜಯದಶಮಿ ಉತ್ಸವದಲ್ಲಿ, ಇಸ್ರೇಲ್‌ನ ಹಿರಿಯ ರಾಜತಾಂತ್ರಿಕರೊಬ್ಬರು ಶುಕ್ರವಾರ ಭಾಗಿಯಾಗಿದ್ದರು.

ಮುಂಬೈನಲ್ಲಿರುವ, ಇಸ್ರೇಲ್‌ ರಾಯಭಾರಿ ಕೊಬ್ಬಿ ಶೋಶಾನಿ ಅವರು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹಾಗೂ ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡಣವೀಸ್‌ ಅವರ ಪಕ್ಕದ ಆಸನದಲ್ಲಿ ಇದ್ದರು.

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ, ಭಾರತ–ಇಸ್ರೇಲ್‌ ರಾಜತಾಂತ್ರಿಕ ಹಾಗೂ ದ್ವಿಪಕ್ಷೀಯ ಚಟುವಟಿಕೆಗಳು ಹೆಚ್ಚಿವೆ. ಈ ಹಿನ್ನೆಲೆಯಲ್ಲಿ, ಇಸ್ರೇಲ್‌ ರಾಯಭಾರಿಯ ಉಪಸ್ಥಿತಿ ಮಹತ್ವ ಪಡೆದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು