ಅಹಮದಾಬಾದ್: ಕೇರಳದ ‘ಇಸ್ರೊ ಗೂಢಚರ್ಯೆ’ ಪ್ರಕರಣದಲ್ಲಿ ಸಿಬಿಐ ಬಂಧಿಸುವ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವ ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್.ಬಿ.ಶ್ರೀಕುಮಾರ್ ಅವರಿಗೆ ಗುಜರಾತ್ ಹೈಕೋರ್ಟ್ ಸೋಮವಾರ ರಕ್ಷಣೆ ನೀಡಿದೆ.

ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವವರೆಗೂ ತಮ್ಮನ್ನು ಬಂಧಿಸದಂತೆ ರಕ್ಷಣೆ ಕೊಡಬೇಕು ಎಂದು ಶ್ರೀಕುಮಾರ್ ಅವರು ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇಸ್ರೊ ವಿಜ್ಞಾನಿ ನಂಬಿ ನಾರಾಯಣನ್ ಅವರ ಮೇಲೆ 1994ರಲ್ಲಿ ಬೇಹುಗಾರಿಕೆ ನಡೆಸಿದ ಪ್ರಕರಣದಲ್ಲಿ ಶ್ರೀಕುಮಾರ್ ಸೇರಿ 18 ಪೊಲೀಸರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.

ನ್ಯಾಯಮೂರ್ತಿ ಎ.ಎಸ್. ಸುಪೇಹಿಯಾ ಸಿಬಿಐಗೆ ನೋಟಿಸ್ ನೀಡಿದ್ದಾರೆ.

ಗುಜರಾತ್ ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿ ಶ್ರೀಕುಮಾರ್ ಅವರು ರಾಜ್ಯ ಸರ್ಕಾರ ಟೀಕಿಸುವುದರಲ್ಲಿ ಹೆಸರುವಾಸಿಯಾಗಿದ್ದರು. 2002ರ ಗುಜರಾತ್ ಗಲಭೆಯಲ್ಲಿ ಮೋದಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಅವರು ಬಹಿರಂಗವಾಗಿ ಟೀಕಿಸಿದ್ದರು. ಕೋಮು ಗಲಭೆಯ ಸಂದರ್ಭದಲ್ಲಿ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುವುದನ್ನು ರಾಜ್ಯ ಸರ್ಕಾರ ತಡೆದಿತ್ತು ಎಂದು ಆರೋಪಿಸಿದ್ದರು. ಸದ್ಯ 74 ವರ್ಷದ ಮಾಜಿ ಅಧಿಕಾರಿಗೆ ಅವರ ಸೇವೆಯ ಸಮಯದಲ್ಲಿ ಬಡ್ತಿ ನಿರಾಕರಿಸಲಾಯಿತು. ನ್ಯಾಯಾಲಯದ ಆದೇಶದ ನಂತರವೇ ಅವರಿಗೆ ಡಿಜಿಪಿ ಶ್ರೇಣಿಗೆ ಬಡ್ತಿ ನೀಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.