ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಅರ್ಜಿ ವಿಚಾರಣೆಗೆ ‘ಸುಪ್ರೀಂ’ ಒಪ್ಪಿಗೆ

ಇಸ್ರೊ ಬೇಹುಗಾರಿಕೆ ಪ್ರಕರಣ: ಡಿಜಿಪಿ ಸೇರಿದಂತೆ ನಾಲ್ವರಿಗೆ ನಿರೀಕ್ಷಣಾ ಜಾಮೀನು
Last Updated 22 ನವೆಂಬರ್ 2021, 14:17 IST
ಅಕ್ಷರ ಗಾತ್ರ

ನವದೆಹಲಿ: 1994ರ ಇಸ್ರೊ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಿಜಿಪಿ ಸೇರಿದಂತೆ ನಾಲ್ವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ಕೇರಳ ಹೈಕೋರ್ಟ್‌ ಆದೇಶ ಪ್ರಶ್ನಿಸಿ, ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಗೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ಸಿ.ಟಿ. ರವಿಕುಮಾರ್ ಅವರ ನೇತೃತ್ವದ ನ್ಯಾಯಪೀಠ ಈ ಸಂಬಂಧ ನೋಟಿಸ್ ಜಾರಿಗೊಳಿಸಿ ನ. 29ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತಿನ ಮಾಜಿ ಡಿಜಿಪಿ ಆರ್‌.ಬಿ. ಶ್ರೀಕುಮಾರ್, ಕೇರಳದ ಇಬ್ಬರು ಮಾಜಿ ಪೊಲೀಸ್ ಅಧಿಕಾರಿಗಳು ಹಾಗೂ ಒಬ್ಬ ನಿವೃತ್ತ ಗುಪ್ತಚರ ಅಧಿಕಾರಿಗೆ ಕೇರಳ ಹೈಕೋರ್ಟ್ ಆ. 13ರಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

ಸಿಬಿಐ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್‌.ವಿ. ರಾಜು ಅವರು, ‘ನಿರೀಕ್ಷಣಾ ಜಾಮೀನು ನೀಡುವುದರಿಂದ ಪ್ರಕರಣದ ತನಿಖೆ ಹಳಿ ತಪ್ಪಬಹುದು’ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT