ಬುಧವಾರ, ಮೇ 25, 2022
27 °C

ರಿಯಲ್‌ ಎಸ್ಟೇಟ್‌ ಏಜೆಂಟ್‌ಗಳ ಮೇಲೆ ಐಟಿ ದಾಳಿ: ₹23.45 ಕೋಟಿ ಅಕ್ರಮ ಹಣ ಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ನಾಸಿಕ್‌ನ ರಿಯಲ್‌ ಎಸ್ಟೇಟ್‌ ಏಜೆಂಟ್‌ಗಳ ಮೇಲೆ ಈಚೆಗೆ ಆದಾಯ ತೆರಿಗೆ ಇಲಾಖೆ (ಐಟಿ) ನಡೆಸಿದ ದಾಳಿಯಲ್ಲಿ ₹23.45 ಕೋಟಿ ಅಕ್ರಮ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಸೋಮವಾರ ಹೇಳಿದೆ.

₹100 ಕೋಟಿಯ ಕಾಳಧನವನ್ನೂ ಪತ್ತೆಹಚ್ಚಲಾಗಿದೆ ಎಂದೂ ತಿಳಿಸಿದೆ. ಅಕ್ಟೋಬರ್‌ 21 ರಂದು ದಾಳಿ ನಡೆದಿತ್ತು.

‘ಇವರಲ್ಲಿ ಪ್ರಮುಖ ವ್ಯಕ್ತಿಯು ಅಕ್ರಮ ಹಣವನ್ನು ಭೂ ಖರೀದಿಗಾಗಿ ಹೂಡಿಕೆ ಮಾಡಿದ್ದಾರೆ’ ಎಂದೂ ಸಿಬಿಡಿಟಿ ಹೇಳಿಕೆಯಲ್ಲಿ ತಿಳಿಸಿದೆ.

‘ಮಹಾರಾಷ್ಟ್ರದ ಪಿಂಪಲ್ಗಾಂವ್ ಬಸ್ವಂತ್ ಪ್ರದೇಶದಲ್ಲಿ ಇವರು ಈರುಳ್ಳಿ ಮತ್ತು ಇತರ ವಾಣಿಜ್ಯ ಬೆಳೆಗಳ ಸಗಟು ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದಾರೆ’ ಎಂದೂ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು