ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಟಿ ದಾಳಿ: ₹3,000 ಕೋಟಿ ಲೆಕ್ಕ ರಹಿತ ನಗದು ವಹಿವಾಟು ಪತ್ತೆ

Last Updated 22 ಮಾರ್ಚ್ 2022, 19:45 IST
ಅಕ್ಷರ ಗಾತ್ರ

ನವದೆಹಲಿ: ರಿಯಲ್ ಎಸ್ಟೇಟ್ ಸಂಸ್ಥೆಯಾದ ಓಮೆಕ್ಸ್‌ ಕಂಪನಿಯು ಗ್ರಾಹಕರಿಂದ ₹3,000 ಕೋಟಿಗೂ ಹೆಚ್ಚಿನ ಮೊತ್ತದ ಲೆಕ್ಕರಹಿತ ನಗದು ವಹಿವಾಟಿನಲ್ಲಿ ತೊಡಗಿದೆ ಎಂಬುದಕ್ಕೆ ಆದಾಯ ತೆರಿಗೆ ಇಲಾಖೆ ಸಾಕ್ಷ್ಯ ಸಂಗ್ರಹಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಉತ್ತರ ಭಾರತದಲ್ಲಿ ಹೆಚ್ಚಾಗಿ ವ್ಯವಹಾರ ನಡೆಸುತ್ತಿರುವ ಓಮೆಕ್ಸ್‌ ಕಂಪನಿಯ ದೆಹಲಿ, ಚಂಡೀಗಡ, ಲೂಧಿಯಾನ, ಲಖನೌ ಮತ್ತು ಇಂದೋರ್‌ನಲ್ಲಿರುವ 45ಕ್ಕೂ ಹೆಚ್ಚು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇದೇ ಮಾರ್ಚ್‌ 14 ರಂದು ದಾಳಿ ನಡೆಸಿದಾಗ ಲೆಕ್ಕರಹಿತ ವಹಿವಾಟು ನಡೆಸಿರುವುದು ಪತ್ತೆಯಾಗಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (ಸಿಬಿಡಿಟಿ) ಹೇಳಿದೆ.

‘ದಾಳಿ ಸಂದರ್ಭದಲ್ಲಿ ದಾಖಲೆಗಳಿಲ್ಲದ, ಲೆಕ್ಕರಹಿತ ₹25 ಕೋಟಿ ನಗದು ಮತ್ತು ₹ 5 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. 11 ಲಾಕರ್‌ಗಳನ್ನು ತಡೆಹಿಡಿಯಲಾಗಿದೆ. ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, 10 ವರ್ಷಗಳಿಂದ ಗ್ರಾಹಕರಿಂದ ನಗದು ಪಡೆದಿರುವ ಬಗ್ಗೆ ರಶೀದಿಗಳನ್ನು ಸಹ ವಶಕ್ಕೆ ಪಡೆದಿದ್ದು, ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ₹ 3,000 ಕೋಟಿಗೂ ಹೆಚ್ಚಿನ ಮೊತ್ತದ ಲೆಕ್ಕರಹಿತ ನಗದು ವಹಿವಾಟಿನಲ್ಲಿ ತೊಡಗಿರುವುದು ಪತ್ತೆಯಾಗಿದೆ’ ಎಂದು ಸಿಬಿಡಿಟಿ ಹೊರಡಿಸಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT