ಮಂಗಳವಾರ, ಡಿಸೆಂಬರ್ 7, 2021
27 °C

ದೆಹಲಿಯಲ್ಲಿ ಐಟಿ ದಾಳಿ: ಬಹಿರಂಗಪಡಿಸದ ₹ 400 ಕೋಟಿ ಆದಾಯ ಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿರುವ (ಎನ್‌ಸಿಆರ್‌) ಎರಡು ರಿಯಲ್‌ ಎಸ್ಟೇಟ್‌ ಉದ್ಯಮ ಸಮೂಹಗಳಿಗೆ ಸೇರಿದ ಸ್ಥಳಗಳ ಮೇಲೆ ನಡೆಸಿದ ದಾಳಿಯಲ್ಲಿ, ₹ 400 ಕೋಟಿ ಮೊತ್ತದ ಬಹಿರಂಗಪಡಿಸದ ಆದಾಯವನ್ನು ಪತ್ತೆ ಮಾಡಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಬುಧವಾರ ತಿಳಿಸಿದೆ.

ವಾಣಿಜ್ಯ ಹಾಗೂ ವಸತಿ ಕಟ್ಟಡಗಳ ನಿರ್ಮಾಣದಲ್ಲಿ ತೊಡಗಿರುವ ಈ ಸಮೂಹಗಳ ಮೇಲೆ ನ. 17ರಂದು ದಾಳಿ ನಡೆಸಲಾಗಿತ್ತು. ದಾಳಿ ಸಂದರ್ಭದಲ್ಲಿ ₹ 10 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ’ ಎಂದು ಇಲಾಖೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

‘ಈ ಎರಡು ಸಂಸ್ಥೆಗಳು, ಬಹಿರಂಗಪಡಿಸದ ಆದಾಯದ ಮೇಲಿನ ತೆರಿಗೆಯೂ ಸೇರಿದಂತೆ ಭಾರಿ ಪ್ರಮಾಣದಲ್ಲಿ ತೆರಿಗೆ ವಂಚನೆ ಮಾಡಿರುವುದು ಕಂಡುಬಂದಿದೆ’ ಎಂದು ಇಲಾಖೆ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು