ಮಂಗಳವಾರ, ಅಕ್ಟೋಬರ್ 26, 2021
20 °C

ಐಟಿ ದಾಳಿ: ₹550 ಕೋಟಿ ದಾಖಲೆ ರಹಿತ ಆದಾಯ ಪತ್ತೆ, ₹142 ಕೋಟಿ ನಗದು ವಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಹೈದರಾಬಾದ್‌ ಮೂಲದ ಹೆಟಿರೊ ಫಾರ್ಮಸುಟಿಕಲ್ಸ್‌ ಸಮೂಹ ಸಂಸ್ಥೆಯ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು,  ₹550 ಕೋಟಿ ಮೊತ್ತದ ದಾಖಲೆ ರಹಿತ ಆದಾಯವನ್ನು (ಲೆಕ್ಕವಿಲ್ಲದ) ಪತ್ತೆ ಮಾಡಿದ್ದು, ₹142 ಕೋಟಿಗೂ ಅಧಿಕ ನಗದನ್ನು ವಶಪಡಿಸಿಕೊಂಡಿರುವುದಾಗಿ ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ.

ದಾಳಿಗೆ ಸಂಬಂಧಿಸಿದಂತೆ ಕಂಪನಿಯ ಅಧಿಕಾರಿಗಳು ತಕ್ಷಣಕ್ಕೆ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.

ಅಕ್ಟೋಬರ್ 6ರಂದು ದೇಶದ ವಿವಿದ ರಾಜ್ಯಗಳಲ್ಲಿನ ಸುಮಾರು 50 ಸ್ಥಳಗಳ ಮೇಲೆ ತೆರಿಗೆ ಇಲಾಖೆ ದಾಳಿ ನಡೆಸಿದೆ.

‘ಶೋಧದ ಸಮಯದಲ್ಲಿ, ಹಲವಾರು ಬ್ಯಾಂಕ್ ಲಾಕರ್‌ಗಳು ಪತ್ತೆಯಾಗಿದ್ದವು. ಅದರಲ್ಲಿ 16 ಲಾಕರ್‌ಗಳನ್ನು ಪರಿಶೀಲಿಸಲಾಗಿದೆ. ಈವರೆಗೆ ದಾಳಿಯಲ್ಲಿ ದಾಖಲೆ ರಹಿತವಾಗಿ ಪತ್ತೆಯಾದ ₹ 142.87 ಕೋಟಿ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಹೇಳಿಕೆಯಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.