ಮಂಗಳವಾರ, ಸೆಪ್ಟೆಂಬರ್ 21, 2021
20 °C

ನಟ ಸೋನು ಸೂದ್ ಮನೆ ಹಾಗೂ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ದಾಳಿ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಸೋನು ಸೂದ್ ಅವರ ಮುಂಬೈ ನಿವಾಸ ಹಾಗೂ ಅವರಿಗೆ ಸಂಬಂಧಿಸಿದ ಲಖನೌ ಕಂಪನಿಗಳಲ್ಲಿ ಕೇಂದ್ರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ತಪಾಸಣೆ ನಡೆಸಿದ್ದಾರೆ.

ಸೋನು ಸೂದ್ ಅವರು ತೆರಿಗೆ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ ಎಂಬ ಆರೋಪದ ಮೇಲೆ ಈ ತಪಾಸಣೆ ನಡೆದಿದ್ದು, ಇದನ್ನು ಐಟಿ ಅಧಿಕಾರಿಗಳು ಖಚಿತಪಡಿಸಿದ್ದಾರೆ.  ಐಟಿ ತಪಾಸಣೆ ನಡೆದಿರುವುದನ್ನು ಸೋನು ಸೂದ್ ಇದುವರೆಗೂ ಖಚಿತಪಡಿಸಿಲ್ಲ.

ಇತ್ತೀಚೆಗಷ್ಟೇ ಸೋನು ಸೂದ್ ಅವರನ್ನು ದೆಹಲಿ ಸರ್ಕಾರ ತನ್ನ ಮಹತ್ವಾಕಾಂಕ್ಷೆಯ ‘ದೇಶ್ ಕಿ ಮೆಂಟರ್‘ ಕಾರ್ಯಕ್ರಮದ ರಾಯಭಾರಿಯನ್ನಾಗಿ ಮಾಡಿತ್ತು. ಅವರು ನಿನ್ನೆಯಷ್ಟೇ ಇದೇ ವಿಚಾರವಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಬೆನ್ನಲ್ಲೆ ಐಟಿ ತಪಾಸಣೆ ನಡೆದಿದೆ.

ಇನ್ನೊಂದೆಡೆ ಸೋನು ಸೂದ್ ಅವರು ಎಎಪಿ ಪಕ್ಷವನ್ನು ಸೇರಲಿದ್ದಾರೆ ಹಾಗೂ ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ವದಂತಿಯನ್ನು ಸೋನು ಸೂದ್ ತಳ್ಳಿಹಾಕಿದ್ದರು.

48 ವರ್ಷದ ನಟ ಸೋನು ಸೂದ್ ಇತ್ತೀಚೆಗೆ ಸಾಕಷ್ಟು ಸಾಮಾಜಿಕ ಸೇವೆಗಳಿಂದ ಅನೇಕ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಕೊರೊನಾ ಲಾಕ್‌ಡೌನ್‌ ನಂತರ ಅವರು ಮಾಡಿದ ಸಾಮಾಜಿಕ ಸೇವೆ ಅವರಿಗೆ ಸಾಕಷ್ಟು ಜನಮನ್ನಣೆ ತಂದು ಕೊಟ್ಟಿದೆ.

ಇದನ್ನೂ ಓದಿ: ಸಿನಿಮಾದಲ್ಲಿ ಅವಕಾಶ ಕೋರಿ ಸೋನು ಸೂದ್ ಕಳುಹಿಸಿದ್ದ ಫೋಟೊ ಇದು!

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು