ಮಂಗಳವಾರ, ಜೂನ್ 28, 2022
21 °C

ಇಫ್ತಾರ್‌ ಕೂಟದಲ್ಲಿ ಭಾಗವಹಿಸಿದ್ದಕ್ಕೂ ರಾಜಕೀಯಕ್ಕೂ ಸಂಬಂಧವಿಲ್ಲ: ನಿತೀಶ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಟ್ನಾ: ಆರ್‌ಜೆಡಿ ಮುಖಂಡರಾದ ರಾಬ್ಡಿದೇವಿ ಅವರ ನಿವಾಸದಲ್ಲಿ ಶುಕ್ರವಾರ ನಡೆದ ಇಫ್ತಾರ್‌ ಕೂಟದಲ್ಲಿ ಪಾಲ್ಗೊಂಡಿದ್ದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಶನಿವಾರ ಹೇಳಿದರು. 

‘ನಾವೆಲ್ಲ ಇಂಥ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತೇವೆ. ಇದರಲ್ಲಿ ಪಾಲ್ಗೊಂಡಿದ್ದರ ಹಿಂದೆ ಯಾವುದೇ ರಾಜಕೀಯ ಇಲ್ಲ. ಕಾರ್ಯಕ್ರಮದಲ್ಲಿ ಭಾಗವಹಿಸಲು ನನಗೆ ಆಹ್ವಾನ ಬಂದಿತ್ತು, ನಾನು ಹಾಜರಾಗಿದ್ದೆ. ನಾವು ಕೂಡ ಇಫ್ತಾರ್‌ ಕೂಟಗಳನ್ನು ಆಯೋಜಿಸುತ್ತೇವೆ ಮತ್ತು ಎಲ್ಲರನ್ನೂ ಆಹ್ವಾನಿಸುತ್ತೇವೆ’ ಎಂದು ಅವರು ಸ್ವಾತಂತ್ರ್ಯ ಹೋರಾಟಗಾರ ವೀರ್‌ ಕುನ್ವರ್‌ ಸಿಂಗ್‌ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗಾರರಿಗೆ ತಿಳಿಸಿದರು.  

ನಿತೀಶ್‌ ಕುಮಾರ್‌ ಅವರು ಆರ್‌ಜೆಡಿ ಮುಖಂಡರು ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ಭಾಗವಹಿಸಿದ್ದು ಬಿಹಾರದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.  

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು