ಗುರುವಾರ , ಜೂನ್ 17, 2021
27 °C

ಸುಶಾಂತ್ ಸಾವು | ಸುಪ್ರೀಂ ಆದೇಶದ ಬಗ್ಗೆ ಪ್ರತಿಕ್ರಿಯಿಸಲ್ಲ –ಸಂಜಯ್‌ ರಾವುತ್‌

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಮುಂಬೈ: ಸುಶಾಂತ್‌ ಸಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಆದೇಶದ ಬಗ್ಗೆ ನಾನು ಪ್ರತಿಕ್ರಿಯಿಸುವುದು ಸೂಕ್ತವಲ್ಲ ಎಂದು ಶಿವಸೇನೆಯ ಹಿರಿಯ ನಾಯಕ ಸಂಜಯ್‌ ರಾವುತ್‌ ಪ್ರತಿಕ್ರಿಯಿಸಿದ್ದಾರೆ.

ಕಳೆದ ಜೂನ್‌ 14ರಂದು ಮುಂಬೈ ಬಾಂದ್ರಾದ ನಿವಾಸದಲ್ಲಿ ನಟ ಸುಶಾಂತ್‌ ಸಿಂಗ್‌ ರಜಪೂತ್‌ (34) ನೇಣು ಬಿಗಿದ ಸ್ಥಿತಿಯಲ್ಲಿ ಸಾವಿಗೀಡಾಗಿದ್ದರು. ಆ ನಿಗೂಢ ಸಾವಿನ ತನಿಖೆಯನ್ನು ಸಿಬಿಐ ಮುಂದುವರಿಸಲು ಸುಪ್ರೀಂ ಕೋರ್ಟ್‌ ಬುಧವಾರ ಅನುಮತಿ ನೀಡಿದೆ.

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ಸಂಬಂಧ ಪಟ್ನಾದಲ್ಲಿ ದಾಖಲಾಗಿರುವ ಎಫ್ಐಆರ್ ಅನ್ನು ಮುಂಬೈಗೆ ವರ್ಗಾಯಿಸಲು ಕೋರಿ ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದು, ಅದಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಆದೇಶ ಪ್ರಕಟಿಸಿದೆ.

ಸುಪ್ರೀಂ ಕೋರ್ಟಿನ ಈ ಆದೇಶದಲ್ಲಿ ನಾನು ಪ್ರತಿಕ್ರಿಯಿಸಲಾರೆ, ಕಾನೂನು ತಿಳಿದವರು ಹಾಗೂ ಮುಂಬೈ ಪೊಲೀಸ್‌ ಆಯುಕ್ತರು ಮತ್ತು ಅಡ್ವೊಕೇಟ್‌ ಜನರಲ್‌ ಅವರು ಪ್ರತಿಕ್ರಿಯಿಸಬೇಕು ಎಂದು ಸಂಜಯ್‌ ರಾವತ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸುಪ್ರೀಂ ಆದೇಶ ಕುರಿತಂತೆ ಈಗ ರಾಜಕೀಯ ಹೇಳಿಕೆ ನೀಡುವುದು ಸೂಕ್ತವಲ್ಲ. ದೇಶದಲ್ಲೇ ನಮ್ಮ ರಾಜ್ಯ ಅತ್ಯುತ್ತಮ ನ್ಯಾಯಾಂಗ ವ್ಯವಸ್ಥೆಯನ್ನು ಹೊಂದಿದೆ. ಇಲ್ಲಿ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಸಂಜಯ್‌ ರಾವುತ್‌ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು