ಭಾನುವಾರ, ಮಾರ್ಚ್ 26, 2023
23 °C

ಲಡಾಖ್ | ಎಲ್‌ಎಸಿ ಬಳಿ ಪರಿಸ್ಥಿತಿ ಸೂಕ್ಷ್ಮವಾಗಿಯೇ ಇದೆ: ಜೈಶಂಕರ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪೂರ್ವ ಲಡಾಖ್‌ ಗಡಿಯಲ್ಲಿ ವಾಸ್ತವ ನಿಯಂತ್ರಣ ರೇಖೆಗುಂಟ (ಎಲ್‌ಎಸಿ) ಪರಿಸ್ಥಿತಿಯು ಸೂಕ್ಷ್ಮವಾಗಿದ್ದು, ಅಪಾಯಕಾರಿಯಾಗಿಯೇ ಇದೆ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಶನಿವಾರ ಹೇಳಿದ್ದಾರೆ.

‘ಎಲ್‌ಎಸಿಯ ಕೆಲ ಸ್ಥಳಗಳಿಂದ ಯೋಧರನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆಗೆ ಸಂಬಂಧಿಸಿ ಗಮನಾರ್ಹ ಪ್ರಗತಿ ಸಾಧಿಸಲಾಗಿದ್ದರೂ ಈ ಪ್ರದೇಶದಲ್ಲಿ ಭಾರತ ಹಾಗೂ ಚೀನಾ ಯೋಧರ ನಿಯೋಜನೆ ಮುಂದುವರಿದಿದೆ. ಈ ಕಾರಣಕ್ಕಾಗಿಯೇ ಗಡಿಯಲ್ಲಿನ ಪರಿಸ್ಥಿತಿ ಸೂಕ್ಷ್ಮ ಹಾಗೂ ಅಪಾಯಕಾರಿ ಎಂಬುದು ಭಾರತೀಯ ಸೇನೆಯ ವಿಶ್ಲೇಷಣೆ’ ಎಂದು ಹೇಳಿದ್ದಾರೆ.

ಅವರು ‘ಇಂಡಿಯಾ ಟುಡೆ ಕಾಂಕ್ಲೇವ್’ನಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದರು.

‘ಗಡಿಯಲ್ಲಿ ಉದ್ಭವಿಸಿದ್ದ ಬಿಕ್ಕಟ್ಟನ್ನು ಪರಿಹರಿಸುವ ಕುರಿತು 2020ರ ಸೆಪ್ಟೆಂಬರ್‌ನಲ್ಲಿ ನಾನು ಮತ್ತು ಆಗ ಚೀನಾ ವಿದೇಶಾಂಗ ಸಚಿವರಾಗಿದ್ದ ವಾಂಗ್‌ ಯಿ ಮಾತುಕತೆ ನಡೆಸಿ, ಒಪ್ಪಂದ ಮಾಡಿಕೊಂಡಿದ್ದೆವು. ಈಗ, ಆ ಒಪ್ಪಂದದಂತೆ ಚೀನಾ ನಡೆದುಕೊಳ್ಳಬೇಕಿದೆ’ ಎಂದು ಜೈಶಂಕರ್‌ ಹೇಳಿದರು.

‘ಪೂರ್ವ ಲಡಾಖ್ ಗಡಿಯಲ್ಲಿನ ಬಿಕ್ಕಟ್ಟು ಬಗೆಹರಿಯದೇ ಉಭಯ ದೇಶಗಳ ನಡುವಿನ ಸಂಬಂಧ ಸಹಜಸ್ಥಿತಿಗೆ ಬರಲು ಸಾಧ್ಯ ಇಲ್ಲ’ ಎಂದು ಸ್ಪಷ್ಟಪಡಿಸಿದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು