ಶನಿವಾರ, ಮೇ 15, 2021
27 °C

ಭಾರತದ ಮೀನುಗಾರರ ಹತ್ಯೆ ಪ್ರಕರಣ: ₹ 10 ಕೋಟಿ ಪರಿಹಾರ ನೀಡಲಿರುವ ಇಟಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಎಎಫ್‌ಪಿ): ಕೇರಳದ ಕರಾವಳಿಯಲ್ಲಿ 2012ರಲ್ಲಿ ಇಟಲಿಯ ನೌಕಾಪಡೆಯ ಇಬ್ಬರು ಸಿಬ್ಬಂದಿ ಗುಂಡಿಟ್ಟು ಕೊಂದಿದ್ದ ಭಾರತದ ಇಬ್ಬರು ಮೀನುಗಾರರ ಕುಟುಂಬಗಳಿಗೆ ಇಟಲಿಯು 1.1 ಮಿಲಿಯನ್‌ ಯುರೊ (ಸುಮಾರು ₹ 10 ಕೋಟಿ) ಪರಿಹಾರ ನೀಡಲಿದೆ. ಪರಿಹಾರ ಮೊತ್ತ ಸ್ವೀಕರಿಸಲು ಭಾರತ ಒಪ್ಪಿದೆ. ಈ ಮೂಲಕ ಉಭಯ ರಾಷ್ಟ್ರಗಳ ನಡುವಿನ ಸಂಬಂಧದಲ್ಲಿ ಬಿರುಕಿಗೆ ಕಾರಣವಾಗಿದ್ದ ಸುದೀರ್ಘ ಪ್ರಕರಣಕ್ಕೆ ಅಂತ್ಯ ಸಿಕ್ಕಂತಾಗಿದೆ.

ರೋಮ್, ಭಾರತ ಸರ್ಕಾರದೊಂದಿಗೆ ಸುದೀರ್ಘ ಮಾತುಕತೆ ನಡೆಸಿದ ನಂತರ ಸಂತ್ರಸ್ಥ ಮೀನುಗಾರರ ಕುಟುಂಬಗಳಿಗೆ ಮತ್ತು ಗುಂಡಿನ ದಾಳಿಯಿಂದ ಹಾನಿಗೊಳಗಾದ ದೋಣಿಯ ಮಾಲೀಕರಿಗೆ ಒಟ್ಟು ₹10 ಕೋಟಿ ಪರಿಹಾರ ನೀಡಲು ಸಿದ್ಧವಾಗಿದೆ ಎಂದು ಇಟಲಿ ಪ್ರತಿನಿಧಿಸುತ್ತಿರುವ ವಕೀಲ ಸುಹೇಲ್ ದತ್ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

‘ನಿರ್ಧರಿತ ಪರಿಹಾರ ಮೊತ್ತ’ ಸ್ವೀಕರಿಸಲು ಸಂತ್ರಸ್ಥ ಕುಟುಂಬಗಳು ಒಪ್ಪಿವೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೂಡ ಹೇಳಿದ್ದಾರೆ.

ಇಟಲಿಯಿಂದ ಹಣ ಸ್ವೀಕರಿಸಿದ ಒಂದು ವಾರದೊಳಗೆ ಸುಪ್ರೀಂ ಕೋರ್ಟ್‌ ಖಾತೆಗೆ ಜಮಾ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದ ಪೀಠವು, ಈ ಪ್ರಕರಣವನ್ನು ಏಪ್ರಿಲ್ 19ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಹೇಳಿದೆ.

ಹೇಗ್‌ನಲ್ಲಿರುವ ಶಾಶ್ವತ ಮಧ್ಯಸ್ಥಿಕೆ ನ್ಯಾಯಮಂಡಳಿ (ಪಿಸಿಎ) ಇಟಲಿಯ ನೌಕಾಪಡೆಯ ಇಬ್ಬರು ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಜರುಗಿಸಬಹುದಾಗಿದೆ ಎಂದು ಕಳೆದ ಜುಲೈನಲ್ಲಿ ಆದೇಶ ಹೊರಡಿಸಿದ ನಂತರ ಈ ಬೆಳವಣಿಗೆ ನಡೆದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು