ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರ: ಮೂವರು ಶಂಕಿತ ಉಗ್ರರ ಬಂಧನ

Last Updated 31 ಅಕ್ಟೋಬರ್ 2022, 15:29 IST
ಅಕ್ಷರ ಗಾತ್ರ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಮೂವರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಚಕ್‌ ಕೆಲ್ಲರ್‌ ಪ್ರದೇಶದಲ್ಲಿ ಇಬ್ಬರು ಉಗ್ರರು ಅಡಗಿದ್ದಾರೆ ಎಂಬ ಮಾಹಿತಿಯು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ದೊರಕಿತು. ಆ ಆಧಾರದ ಮೇಲೆ ಭಾನುವಾರ ಸಂಜೆ ಚಕ್‌ ಪೋಸ್ಟ್‌ಗಳನ್ನು ಸ್ಥಾಪಿಸಿ ಶಂಕಿತ ಉಗ್ರರಿದ್ದ ವಾಹನವನ್ನು ತಡೆಹಿಡಿಯಲಾಯಿತು. ಆದರೆ ವಾಹನದಲ್ಲಿದ್ದವರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಅವರನ್ನು ವಶಕ್ಕೆ ತೆಗೆದುಕೊಂಡು ಪೊಲೀಸರಿಗೆ ಹಸ್ತಾಂತರಿಸಲಾಯಿತು. ಶಂಕಿತರನ್ನು ಗೌಹರ್‌ ಮನ್ಝೂರ್‌ ಮತ್ತು ಆಖಿಬ್‌ ಹುಸೇನ್‌ ನಂದಾ ಎಂದು ಗುರುತಿಸಲಾಗಿದೆ. ಅವರಿಬ್ಬರೂ ಪುಲ್ವಾಮಾದ ದ್ರಾಬ್‌ಗಮ್ ನಿವಾಸಿಗಳು. ಅವರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆ ವಕ್ತಾರರು ತಿಳಿಸಿದ್ದಾರೆ.

ಮತ್ತೊಂದು ಕಾರ್ಯಾಚರಣೆಯನ್ನು ಮೋಹಂದ್‌ಪುರದಲ್ಲಿ ನಡೆಸಲಾಯಿತು. ಈ ವೇಳೆ ಒಬ್ಬ ಶಂಕಿತ ಉಗ್ರನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆತನಿಂದ ಬಂದೂಕು ಸೇರಿ ಕೆಲ ಶಸ್ತ್ರಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT