ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ಇಂದು(ಶನಿವಾರ) ವಿಚಾರಣೆಗೆ ಹಾಜರಾಗಲಿದ್ದಾರೆ.
₹ 200 ಕೋಟಿ ಹಣ ವಂಚನೆ ಪ್ರಕರಣದಲ್ಲಿ ಶ್ರೀಲಂಕಾ ಮೂಲದ ಜಾಕ್ವೆಲಿನ್ ಅವರ ಹೆಸರು ಕೇಳಿಬಂದಿದೆ. ಆ ಹಿನ್ನೆಲೆಯಲ್ಲಿ ಬಾಲಿವುಡ್ ನಟಿಯನ್ನು ಎರಡನೇ ಬಾರಿ ಇ.ಡಿ ವಿಚಾರಣೆಗೆ ಒಳಪಡಿಸುತ್ತಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 30 ರಂದು ಜಾಕ್ವೆಲಿನ್ ಫರ್ನಾಂಡಿಸ್ ಅವರ ವಿಚಾರಣೆಯನ್ನು ಇ.ಡಿ ನಡೆಸಿತ್ತು.
ಕಿಚ್ಚ ಸುದೀಪ್ ಅಭಿನಯದ ಬಿಗ್ಬಜೆಟ್ ಚಿತ್ರ ‘ವಿಕ್ರಾಂತ್ ರೋಣ’ದಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕುವುದರ ಜೊತೆಗೆ ವಿಶೇಷ ಪಾತ್ರದಲ್ಲೂ ಜಾಕ್ವೆಲಿನ್ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಜಾಕ್ವೆಲಿನ್ ಅವರ ಪಾತ್ರದ ಫಸ್ಟ್ಲುಕ್ ಸಹ ಬಿಡುಗಡೆಯಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.