ಸೋಮವಾರ, ಜುಲೈ 4, 2022
25 °C

ಯುಜಿಸಿ ಅಧ್ಯಕ್ಷರಾಗಿ ಜಗದೀಶ್‌ ಕುಮಾರ್ ನೇಮಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ : ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ಕುಲಪತಿ ಎಂ.ಜಗದೀಶ್ ಕುಮಾರ್‌ ಅವರನ್ನು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷರನ್ನಾಗಿ ಶುಕ್ರವಾರ ನೇಮಕ ಮಾಡಲಾಗಿದೆ.

ಅವರ ಅಧಿಕಾರಾವಧಿ ಐದು ವರ್ಷಗಳು ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ. ಯುಜಿಸಿ ಅಧ್ಯಕ್ಷರಾಗಿದ್ದ ಪ್ರೊ.ಡಿ.ಪಿ.ಸಿಂಗ್ ಅವರು ಕಳೆದ ಡಿಸೆಂಬರ್ 7ರಂದು ರಾಜೀನಾಮೆ ನೀಡಿದ್ದರಿಂದ ಈ ಸ್ಥಾನ ತೆರವಾಗಿತ್ತು.

60 ವರ್ಷದ ಜಗದೀಶ್‌ ಕುಮಾರ್ ಅವರು ಸದ್ಯ ಜೆಎನ್‌ಯುನ ಹಂಗಾಮಿ ಕುಲಪತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ ಅವರ ಅಧಿಕಾರಾವಧಿ ಮುಕ್ತಾಯವಾಗಿತ್ತು. ಅವರ ಅಧಿಕಾರಾವಧಿಯಲ್ಲಿ ಹಲವು ವಿವಾದಗಳಿಂದಾಗಿ ಜೆಎನ್‌ಯು ಸುದ್ದಿಯಲ್ಲಿತ್ತು.

ಎಲೆಕ್ಟ್ರಾನಿಕ್‌ ಎಂಜಿನಿಯರಿಂಗ್‌ ಕ್ಷೇತ್ರದಲ್ಲಿ ಹೊಂದಿರುವ ಜ್ಞಾನದಿಂದಾಗಿ ಜಗದೀಶ್‌ ಕುಮಾರ್‌ ಅವರು ಅಪಾರ ಮನ್ನಣೆಗೆ ಪಾತ್ರರಾಗಿದ್ದಾರೆ. ಐಐಟಿ–ಮದ್ರಾಸ್‌ನಿಂದ ಎಲೆಕ್ಟ್ರಾನಿಕ್ಸ್‌ ಎಂಜಿನಿಯರಿಂಗ್‌ನಲ್ಲಿ (ಇಇ) ಎಂ.ಎಸ್‌ ಹಾಗೂ ಪಿಎಚ್‌.ಡಿ ಪದವಿ ಗಳಿಸಿದ್ದಾರೆ. ಐಐಟಿ–ಖರಗ್‌ಪುರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ, ಐಐಟಿ–ದೆಹಲಿಯಲ್ಲಿ ಸಹ ಪ್ರಾಧ್ಯಾಪಕರಾಗಿಯೂ ಅವರು ಕಾರ್ಯನಿರ್ವಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು