ಸೋಮವಾರ, ನವೆಂಬರ್ 30, 2020
19 °C

ಹೈದರಾಬಾದ್ ಪ್ರವಾಹ: ರಕ್ಷಣಾ ಕಾರ್ಯಾಚರಣೆಗೆ ಸ್ಪೀಡ್ ಬೋಟ್ ಕಳುಹಿಸಲು ಜಗನ್ ಆದೇಶ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Jagan

ಅಮರಾವತಿ: ತೆಲಂಗಾಣ ಸರ್ಕಾರದ ಮನವಿಗೆ ಪ್ರತಿಕ್ರಿಯಿಸಿದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಹೈದರಾಬಾದ್ ಪ್ರವಾಹ ರಕ್ಷಣಾ ಕಾರ್ಯಾಚರಣೆಗೆ ಸ್ಪೀಡ್ ಬೋಟ್‌ಗಳನ್ನು ಕಳುಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದ ಹೈದರಾಬಾದ್‌ ನಗರದ ಬಹುತೇಕ ಪ್ರದೇಶಗಳು ಜಲಾವೃತವಾಗಿವೆ. 
ಇಲ್ಲಿಯವರೆಗೆ 37,000ಕ್ಕಿಂತಲೂ ಹೆಚ್ಚು  ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ, 33 ಮಂದಿ ಸಾವಿಗೀಡಾಗಿದ್ದಾರೆ ಎಂದು ನಗರಾಭಿವೃದ್ದಿ ಮತ್ತು ಪುರಸಭೆ ಆಡಳಿತ ಸಚಿವ ಕೆ.ಟಿ. ರಾಮರಾವ್ ಹೇಳಿದ್ದಾರೆ.

ಏತನ್ಮಧ್ಯೆ, ತೆಲಂಗಾಣದಲ್ಲಿ ಭಾರಿ ಮಳೆ ಅಕ್ಟೋಬರ್ 22 ರವರೆಗೆ ಮುಂದುವರಿಯಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಮುನ್ಸೂಚನೆ ನೀಡಿದೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು