ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಎಸ್‌ಆರ್‌ ಕಾಂಗ್ರೆಸ್‌ ಗೌರವಾಧ್ಯಕ್ಷೆ ಸ್ಥಾನಕ್ಕೆ ಜಗನ್‌ ತಾಯಿ ರಾಜೀನಾಮೆ

Last Updated 8 ಜುಲೈ 2022, 11:17 IST
ಅಕ್ಷರ ಗಾತ್ರ

ಅಮರಾವತಿ: ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್‌. ಜಗನ್‌ ಮೋಹನ್‌ ರೆಡ್ಡಿ ಅವರ ತಾಯಿ ವೈ.ಎಸ್‌. ವಿಜಯಮ್ಮ ಅವರು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಗೌರವಾಧ್ಯಕ್ಷೆ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.

ನೆರೆಯ ರಾಜ್ಯದಲ್ಲಿ ವೈಎಸ್‌ಆರ್‌ ತೆಲಂಗಾಣ ಪಕ್ಷವನ್ನು ಮುನ್ನಡೆಸುತ್ತಿರುವ ಪುತ್ರಿ ಶರ್ಮಿಳಾ ಅವರಿಗೆ ಬೆಂಬಲ ನೀಡುವ ಸಲುವಾಗಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

‘ನಾನು ಜಗನ್‌ಗೆ ಸದಾ ಹತ್ತಿರವಾಗಿರುತ್ತೇನೆ’ ಎಂದು ರಾಜೀನಾಮೆ ನಿರ್ಧಾರ ಪ್ರಕಟಿಸಿದ ಬಳಿಕ ಅವರು ತಿಳಿಸಿದ್ದಾರೆ.

‘ತೆಲಂಗಾಣದಲ್ಲಿ ಶರ್ಮಿಳಾ ಏಕಾಂಗಿ ಹೋರಾಟ ನಡೆಸುತ್ತಿದ್ದಾಳೆ. ತಂದೆಯ ಆದರ್ಶಗಳನ್ನು ಪಾಲಿಸುತ್ತಿರುವ ಆಕೆಗೆ ನನ್ನ ಬೆಂಬಲದ ಅಗತ್ಯವಿದೆ. ಎರಡು ಪಕ್ಷಗಳ ಸದಸ್ಯೆಯಾಗಿರಬಹುದೇ ಎಂಬ ಸಂದಿಗ್ಧತೆಯಲ್ಲಿ ನಾನಿದ್ದೇನೆ. ಈ ಪರಿಸ್ಥಿತಿಯಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಗೌರವಾಧ್ಯಕ್ಷೆ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯವಿಲ್ಲ’ ಎಂದು ವಿಜಯಮ್ಮ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT