ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಹಾಂಗೀರ್‌ಪುರಿಯಲ್ಲಿ ನೆಲಸಮ ಕಾರ್ಯಾಚರಣೆ; ಯಂತ್ರಕ್ಕೆ ಅಡ್ಡನಿಂತ ಬೃಂದಾ ಕಾರಟ್

Last Updated 21 ಏಪ್ರಿಲ್ 2022, 3:23 IST
ಅಕ್ಷರ ಗಾತ್ರ

ನವದೆಹಲಿ:ಜಹಾಂಗೀರ್‌ಪುರಿಯಲ್ಲಿ ನೆಲಸಮ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿದ್ದರೂ, ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆಯನ್ನು ಮುಂದುವರೆಸಿದ್ದರು. ಆಗ ಮಧ್ಯಪ್ರವೇಶಿಸಿದ ಸಿಪಿಎಂ ನಾಯಕಿ ಬೃಂದಾ ಕಾರಟ್ ಅವರು, ಬುಲ್ಡೋಜರ್‌ ಯಂತ್ರಗಳಿಗೆ ಅಡ್ಡವಾಗಿ ನಿಂತರು.

ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಸುಪ್ರೀಂ ನೀಡಿದ್ದ ಆದೇಶದ ಪ್ರತಿಯನ್ನು ಅಧಿಕಾರಿಗಳಿಗೆ, ಬುಲ್ಡೋಜರ್‌ ಯಂತ್ರಗಳ ಚಾಲಕರಿಗೆ ತೋರಿಸಿದರು. ಜತೆಗೆ ಅಧಿಕಾರಿಗಳ ಜತೆಗೆ ವಾಗ್ವಾದ ನಡೆಸಿದರು. ಕಾರ್ಯಾಚರಣೆ ನಡೆಸುತ್ತಿರುವ ಯಂತ್ರಗಳನ್ನು ಬೃಂದಾ ತಡೆಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಬೃಂದಾ ಕಾರಟ್ ಮಾತ್ರವೇ ಈ ಕಾರ್ಯಾಚರಣೆ ವಿರುದ್ಧ ನಿಂತಿದ್ದಾರೆ. ವಿರೋಧ ಪಕ್ಷಗಳ ಉಳಿದ ನಾಯಕರೆಲ್ಲಾ ಎಲ್ಲಿ ಹೋಗಿದ್ದಾರೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT