ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಸರ್ಕಾರದ ಬಂಗ್ಲೆಯಲ್ಲಿ ಕುಳಿತು ಸುಳ್ಳು ಸುದ್ದಿ ಹಬ್ಬಿಸುವ ಆಜಾದ್‌: ಜೈರಾಂ

ಗುಲಾಂ ನಬಿ ಆಜಾದ್‌ ವಿರುದ್ದ ಜೈರಾಂ ವಾಗ್ದಾಳಿ
Last Updated 2 ಸೆಪ್ಟೆಂಬರ್ 2022, 14:26 IST
ಅಕ್ಷರ ಗಾತ್ರ

ನವದೆಹಲಿ: ಇತ್ತೀಚೆಗೆಷ್ಟೇ ಕಾಂಗ್ರೆಸ್‌ ತೊರೆದಿರುವ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಹಾಗೂ ಪಕ್ಷದ ಇತರ ಮುಖಂಡರ ನಡುವಿನ ವಾಕ್ಸಮರ ಮುಂದುವರಿದಿದೆ.

ಆಜಾದ್ ವಿರುದ್ದ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌ನ ಹಿರಿಯ ಮುಖಂಡ ಜೈರಾಂ ರಮೇಶ್, ‘ಮೋದಿ ಸರ್ಕಾರ ದೆಹಲಿಯಲ್ಲಿ ಒದಗಿಸಿರುವ ಬಂಗಲೆಯ ವಿಶಾಲ ಹಸಿರು ಹಾಸಿನ ಮೇಲೆ ಕುಳಿತು ಸುಳ್ಳು ಹಬ್ಬಿಸುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.

ಜಮ್ಮು–ಕಾಶ್ಮೀರದ ಭಲೆಸ್ಸಾದಲ್ಲಿ ಪಕ್ಷದ ಕಾರ್ಯಕರ್ತರು ಸಾರ್ವಜನಿಕರ ಸಭೆ ನಡೆಸುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದನ್ನು ಉಲ್ಲೇಖಿಸಿರುವ ಜೈರಾಂ ರಮೇಶ್, ‘ಇದು ವಾಸ್ತವ. ನವದೆಹಲಿಯಲ್ಲಿ ಮೋದಿ ನೇತೃತ್ವದ ಸರ್ಕಾರ ನೀಡಿರುವ ಬಂಗ್ಲೆಯಲ್ಲಿ ಕುಳಿತವರು ಸೃಷ್ಟಿಸಿರುವ ಸುಳ್ಳು ಸುದ್ದಿಯಲ್ಲ’ ಎಂದಿದ್ದಾರೆ.

ಭಲೆಸ್ಸಾ, ಆಜಾದ್‌ ಅವರ ತವರು. ಇಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯ ವಿಡಿಯೊವೊಂದನ್ನು ಕಾಂಗ್ರೆಸ್‌ನ ಜಮ್ಮು–ಕಾಶ್ಮೀರದ ಮುಖಂಡರೊಬ್ಬರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ‘ಗಂದೋಹದಲ್ಲಿ ನಡೆದ ಮಾಸಿಕ ಸಭೆಯಲ್ಲಿ ಭಲೆಸ್ಸಾ ಉಪವಿಭಾಗದ ಎಲ್ಲ ಬ್ಲಾಕ್‌ಗಳ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಕಳೆದ 50 ವರ್ಷಗಳಿಂದ ಪ್ರತಿ ತಿಂಗಳ ಮೊದಲನೇ ದಿನ ಈ ಸಭೆಯನ್ನು ಆಯೋಜಿಸಲಾಗುತ್ತದೆ’ ಎಂಬ ಸಾಲುಗಳು ವಿಡಿಯೊದೊಂದಿಗೆ ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT