ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಶಂಕರ್‌- ಬ್ಲಿಂಕೆನ್‌ ಮಾತುಕತೆ: ಭಾರತ- ಅಮೆರಿಕ ಸಹಕಾರ ಕುರಿತು ಚರ್ಚೆ

Last Updated 30 ಜನವರಿ 2021, 6:36 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಟೋನಿ ಬ್ಲಿಂಕೆನ್ ಅವರು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್ ಅವರಿಗೆ ದೂರವಾಣಿ ಕರೆ ಮಾಡಿ ಚರ್ಚಿಸಿದರು.

‘ಕೋವಿಡ್–19’ ಲಸಿಕೆ ಕುರಿತು ಪರಸ್ಪರ ಸಹಕಾರ, ಪ್ರಾದೇಶಿಕ ಅಭಿವೃದ್ಧಿ ಮತ್ತು ದ್ವಿಪಕ್ಷೀಯ ಒಪ್ಪಂದ ಕುರಿತು ಉಭಯ ನಾಯಕರು ಚರ್ಚಿಸಿದರು ಎಂದು ಸಚಿವಾಲಯದ ವಕ್ತಾರ ನೆಡ್ ಪ್ರೈಸ್ ಶುಕ್ರವಾರ ತಿಳಿಸಿದರು.

ಇತ್ತೀಚೆಗಷ್ಟೇ ಅಧಿಕಾರ ಸ್ವೀಕರಿಸಿರುವ ಬ್ಲಿಂಕೆನ್ ಅವರು ಜೈಶಂಕರ್ ಅವರೊಂದಿಗೆ ನಡೆಸಿದ ಮೊದಲ ದೂರವಾಣಿ ಮಾತುಕತೆ ಇದಾಗಿದೆ. ಅಮೆರಿಕದ ಪಾಲುದಾರರಾಗಿ ಭಾರತದ ಪಾತ್ರವನ್ನು ಬ್ಲಿಂಕೆನ್ ಅರ್ಥ ಮಾಡಿಕೊಂಡಿದ್ದಾರೆ. ಪ್ರಾದೇಶಿಕ ಸಹಕಾರ ಕುರಿತು ಚರ್ಚಿಸಿದ್ದಾರೆ ಎಂದು ಅವರು ಹೇಳಿದರು.

ಉಭಯ ನಾಯಕರು ಜಾಗತಿಕ ಬೆಳವಣಿಗೆ ಕುರಿತಂತೆ ಪರಸ್ಪರ ಸಹಕಾರದೊಂದಿಗೆ ಕಾರ್ಯ ನಿರ್ವಹಿಸಲು ಹಾಗೂ ಆದಷ್ಟು ಶೀಘ್ರ ಪರಸ್ಪರ ಭೇಟಿಯಾಗಿ ಚರ್ಚಿಸಲು ಸಮ್ಮತಿಸಿದರು ಎಂದು ಪ್ರೈಸ್ ಅವರು ತಿಳಿಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಬ್ಲಿಂಕೆನ್ ಅವರು ಕೆನಡಾ, ಮೆಕ್ಸಿಕೊ, ಜಪಾನ್‌, ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾ, ಬ್ರಿಟನ್‌, ಜರ್ಮನಿ, ಫ್ರಾನ್ಸ್‌, ಇಸ್ರೇಲ್‌ ಮತ್ತು ದಕ್ಷಿಣ ಆಫ್ರಿಕಾ ದೇಶಗಳ ವಿದೇಶಾಂಗ ವ್ಯವಹಾರಗಳ ಸಚಿವರುಗಳ ಜತೆಯಲ್ಲಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT