ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್‌ನೊಂದಿಗೆ ಜೈ ಶಂಕರ್‌ ಮಾತುಕತೆ

Last Updated 15 ಡಿಸೆಂಬರ್ 2020, 10:16 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಪ್ರವಾಸದಲ್ಲಿರುವಬ್ರಿಟನ್‌ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್ ಅವರು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಮಂಗಳವಾರ ಭೇಟಿಯಾಗಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಈ ವೇಳೆ ವ್ಯಾಪಾರ, ರಕ್ಷಣಾ, ಶಿಕ್ಷಣ, ಪರಿಸರ ಮತ್ತು ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಬ್ರೆಕ್ಸಿಟ್‌ನ ಬಳಿಕ ಬ್ರಿಟನ್‌, ಆರ್ಥಿಕತೆಯಲ್ಲಿ ಮುನ್ನಡೆ ಸಾಧಿಸುತ್ತಿರುವ ಭಾರತದಂತಹ ದೇಶಗಳೊಂದಿಗೆ ವ್ಯಾಪಾರ ಸಂಬಂಧವನ್ನು ಇನ್ನಷ್ಟು ವೃದ್ಧಿಸಲು ಉತ್ಸುಕವಾಗಿದೆ.

‘ಬ್ರಿಟನ್‌ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್ ಅವರನ್ನು ಜೈ ಶಂಕರ್‌ ಸ್ವಾಗತಿಸಿದರು. ದ್ವಿಪಕ್ಷೀಯ ಆಸಕ್ತಿ, ಪ್ರಾದೇಶಿಕ, ಅಂತರರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸುವುದು ಈ ಭೇಟಿಯ ಮುಖ್ಯ ಉದ್ದೇಶವಾಗಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅನುರಾಗ್‌ ಶ್ರೀವಾಸ್ತವ್‌ ಅವರು ಟ್ವೀಟ್‌ ಮಾಡಿದ್ದಾರೆ.

ಡೊಮಿನಿಕ್ ರಾಬ್ ಅವರು ಪರಿಸರ ಹಾಗೂ ಶಿಕ್ಷಣ ಸಚಿವರನ್ನೂ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಅಲ್ಲದೇ ಇದೇ 17ರಂದು ಅವರು ಬೆಂಗಳೂರಿಗೂ ಪ್ರಯಾಣಿಸಲಿದ್ದು, ಈ ವೇಳೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರನ್ನು ಭೇಟಿಯಾಗಲಿದ್ದಾರೆ. ಅಲ್ಲದೆ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರು ಕೂಡ ಮುಂದಿನ ವರ್ಷ ಭಾರತಕ್ಕೆ ಆಗಮಿಸುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT