ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಕಾರ ವೃದ್ಧಿ: ಉಜ್ಬೇಕಿಸ್ತಾನ ಸಚಿವರೊಂದಿಗೆ ಎಸ್.ಜೈಶಂಕರ್ ಮಾತುಕತೆ

Last Updated 10 ಸೆಪ್ಟೆಂಬರ್ 2020, 9:48 IST
ಅಕ್ಷರ ಗಾತ್ರ

ಮಾಸ್ಕೊ:ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಇಲ್ಲಿ ಉಜ್ಬೇಕಿಸ್ತಾನದ ವಿದೇಶಾಂಗ ಸಚಿವರೊಂದಿಗೆ ಗುರುವಾರ ದ್ವಿಪಕ್ಷೀಯ ಸಭೆ ನಡೆಸಿದರು. ಈ ವೇಳೆ ಉಭಯ ನಾಯಕರು ಪ್ರಾದೇಶಿಕ ಸಮಸ್ಯೆ ಮತ್ತು ಸಹಕಾರ ವೃದ್ಧಿ ಬಗ್ಗೆ ಚರ್ಚೆ ನಡೆಸಿದರು.

ರಷ್ಯಾದಲ್ಲಿ ನಾಲ್ಕು ದಿನಗಳ ಪ್ರವಾಸದಲ್ಲಿರುವ ಜೈ ಶಂಕರ್‌ ಅವರುಶಾಂಘೈ ಸಹಕಾರ ಶೃಂಗಸಭೆ(SCO)ಯ ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

‘ಉಜ್ಬೇಕಿಸ್ತಾನದ ವಿದೇಶಾಂಗ ಸಚಿವರೊಂದಿಗೆ ಭಾರತ ಮತ್ತುಉಜ್ಬೇಕಿಸ್ತಾನದ ನಡುವಿನ ಸಂಬಂಧ ವೃದ್ಧಿ ಮತ್ತು ಪ್ರಾದೇಶಿಕ ಸಮಸ್ಯೆಗಳನ್ನು ಒಗ್ಗೂಡಿ ಬಗೆಹರಿಸುವ ಕುರಿತು ಚರ್ಚೆ ನಡೆಸಲಾಯಿತು’ ಎಂದು ಜೈಶಂಕರ್‌ ಟ್ವೀಟ್‌ ಮಾಡಿದ್ದಾರೆ.

ಜೈಶಂಕರ್ ಅವರು ತಜಿಕಿಸ್ತಾನ, ಮತ್ತು ಕಿರ್ಗಿಸ್ತಾನ ದೇಶಗಳ ಸಚಿವರೊಂದಿಗೆ ಬುಧವಾರ ಪ್ರತ್ಯೇಕ ಸಭೆ ನಡೆಸಿದ್ದರು. ಈ ಸಂದರ್ಭದಲ್ಲಿ ಎರಡೂ ದೇಶಗಳು ಭಾರತದೊಂದಿಗೆ ಕಾರ್ಯತಂತ್ರದ ಸಂಬಂಧವನ್ನು ಹೆಚ್ಚಿಸಲು ಒಪ್ಪಿಕೊಂಡಿವೆ.

‘ಉಜ್ಬೇಕಿಸ್ತಾನ ಮತ್ತು ಭಾರತದ ನಡುವಿನ ಸಂಬಂಧ ಹಿಂದಿನಿಂದಲೂ ಬಹಳ ಸದೃಢವಾಗಿದೆ’ ಎಂದುತಾಷ್ಕೆಂಟ್‌ನ ಭಾರತೀಯ ರಾಯಭಾರಿ ಕಚೇರಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT