ಶನಿವಾರ, ಜುಲೈ 2, 2022
20 °C

ಕೆನಡಾದಲ್ಲಿ ಐವರು ಭಾರತೀಯರ ದುರ್ಮರಣ: ವಿದೇಶಾಂಗ ಸಚಿವ ಜೈಶಂಕರ್ ಸಂತಾಪ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕೆನಡಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.  

ಕೆನಡಾದಲ್ಲಿರುವ ಭಾರತೀಯ ಹೈಕಮಿಷನರ್ ಅಜಯ್ ಬಿಸಾರಿಯಾ ಪ್ರಕಾರ, ಶನಿವಾರ ಟೊರಾಂಟೊ ಬಳಿ ಅಪಘಾತ ಸಂಭವಿಸಿದ್ದು, ಐವರು ಸಾವಿಗೀಡಾಗಿದ್ದಾರೆ. ಗಾಯಗೊಂಡಿರುವ ಇಬ್ಬರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿಗಳ ಸಾವಿಗೆ ಸಂತಾಪ ಸೂಚಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್,‘ಕೆನಡಾದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಗಾಯಗೊಂಡವರ ಚೇತರಿಕೆಗೆ ಪ್ರಾರ್ಥಿಸುತ್ತೇನೆ. ಭಾರತ ಸರ್ಕಾರವು ಎಲ್ಲಾ ಅಗತ್ಯ ಬೆಂಬಲ ಹಾಗೂ ಸಹಾಯವನ್ನು ಒದಗಿಸುತ್ತದೆ’ ಎಂದು  ಟ್ವೀಟ್ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು