ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಆಜಾದ್ ಕಾಶ್ಮೀರ' ವಿವಾದಾತ್ಮಕ ಹೇಳಿಕೆ ಬಗ್ಗೆ ಜಲೀಲ್ ಸ್ಪಷ್ಟನೆ

Last Updated 13 ಆಗಸ್ಟ್ 2022, 9:24 IST
ಅಕ್ಷರ ಗಾತ್ರ

ತಿರುವನಂತಪುರ: ಫೇಸ್‌ಬುಕ್‌ನಲ್ಲಿ ಕಾಶ್ಮೀರದ ಕುರಿತು ವಿವಾದಾತ್ಮಕ ಹೇಳಿಕೆ ಸಂಬಂಧಿಸಿದಂತೆ ಕೇರಳದ ಎಲ್‌ಡಿಎಫ್ಶಾಸಕ, ಮಾಜಿ ಸಚಿವ ಕೆ.ಟಿ. ಜಲೀಲ್, ಶನಿವಾರ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಟೀಕಾಕಾರರನ್ನು ದೂಷಿಸಿದ್ದಾರೆ.

ವಿವಾದಗಳಿಗೆ ಒಂದೇ ಸಾಲಿನ ಉತ್ತರ ನೀಡಿರುವ ಜಲೀಲ್, ತಮ್ಮ ಹೇಳಿಕೆ ಅರ್ಥ ಮಾಡಿಕೊಳ್ಳಲು ವಿಫಲರಾದವರ ಬಗ್ಗೆ ಅನುಕಂಪವಿದೆ ಎಂದು ಹೇಳಿದ್ದಾರೆ.

ಆದರೂ 'ಭಾರತ ಅಧೀನ ಜಮ್ಮು ಮತ್ತು ಕಾಶ್ಮೀರ' ಎಂಬ ತಮ್ಮ ಉಲ್ಲೇಖದ ಬಗ್ಗೆ ಯಾವುದೇ ಸ್ಪಷ್ಟನೆಯನ್ನು ನೀಡಲಿಲ್ಲ.

ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಜಲೀಲ್, 'ಆಜಾದ್ ಕಾಶ್ಮೀರ' ಅನ್ನು ಉದ್ಧರಣ ಚಿಹ್ನೆಯಲ್ಲಿ ಬರೆದಾಗ ಅದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗದವರ ಬಗ್ಗೆ ನನಗೆ ಅನುಕಂಪವಿದೆ ಎಂದು ಮಲಯಾಳಂ ಭಾಷೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರವನ್ನು ಭಾರತ ಅಧೀನ ಜಮ್ಮು ಮತ್ತು ಕಾಶ್ಮೀರ (ಭಾರತ ಆಕ್ರಮಿತ ಜಮ್ಮು ಮತ್ತು ಕಾಶ್ಮೀರ) ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ‘ಆಜಾದ್‌ ಕಾಶ್ಮೀರ’ ಎಂದು ಕೆ.ಟಿ. ಜಲೀಲ್ ಹೇಳಿರುವುದು ಭಾರಿ ವಿವಾದಕ್ಕೆ ಕಾರಣವಾಗಿತ್ತು.

ಈ ಸಂಬಂಧ ಜಲೀಲ್ ವಿರುದ್ಧ ಭಾರಿ ಟೀಕೆಗಳು ವ್ಯಕ್ತವಾಗಿದ್ದವು. ಕೇರಳದ ಬಿಜೆಪಿ ನಾಯಕರು ಜಲೀಲ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT