ಶನಿವಾರ, ಮೇ 21, 2022
20 °C

ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡ: ಹುತಾತ್ಮರಿಗೆ ಪ್ರಧಾನಿ ಮೋದಿ ನಮನ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: 1919ರಲ್ಲಿ ನಡೆದ ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡದ ಕರಾಳ ಸ್ಮರಣೆಯ ಭಾಗವಾಗಿ ಹುತಾತ್ಮರಿಗೆ ಗೌರವ ಸಮರ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಅವರ ಸ್ಥೈರ್ಯ ಮತ್ತು ಬಲಿದಾನ ಸದಾ ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದರು.

'1919ರಂದು, ಇದೇ ದಿನ ಜಲಿಯನ್‌ ವಾಲಾಬಾಗ್‌ನಲ್ಲಿ ಹುತಾತ್ಮರಾದವರಿಗೆ ನಮನಗಳು. ಅವರ ಸ್ಥೈರ್ಯ ಮತ್ತು ಬಲಿದಾನ ಮುಂಬರುವ ಪ್ರತಿಯೊಂದು ಪೀಳಿಗೆಗೂ ಸ್ಫೂರ್ತಿ ತುಂಬುತ್ತದೆ. ಕಳೆದ ವರ್ಷ ಜಲಿಯನ್‌ ವಾಲಾಬಾಗ್‌ ಸ್ಮಾರಕದ ನವೀಕರಣಗೊಂಡ ಕಾಂಪ್ಲೆಕ್ಸ್‌ ಉದ್ಘಾಟನೆ ವೇಳೆ ಮಾಡಿದ ಭಾಷಣವನ್ನು ಹಂಚಿಕೊಳ್ಳುತ್ತಿದ್ದೇನೆ' ಎಂದು ಅಂದಿನ ಭಾಷಣದ ಯೂಟ್ಯೂಬ್‌ ಲಿಂಕ್‌ನೊಂದಿಗೆ ಪಿಎಂ ಮೋದಿ ಟ್ವೀಟ್‌ ಮಾಡಿದ್ದಾರೆ.

1919ರ ಏಪ್ರಿಲ್‌ 13ರಂದು ಪಂಜಾಬ್‌ನ ಅಮೃತಸರದ ಜಲಿಯನ್‌ ವಾಲಾಬಾಗ್‌ನಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಂದಿ ಬ್ರಿಟಿಷ್‌ರ ದೌರ್ಜನ್ಯದ ವಿರುದ್ಧ ಪ್ರತಿರೋಧ ದಾಖಲಿಸಲು ನೆರೆದಿದ್ದರು. ಸಾರ್ವಜನಿಕ ಪ್ರತಿಭಟನಾ ಸಭೆಯ ನಿಷೇಧದ ನೆಪದಲ್ಲಿ ಬ್ರಿಟಿಷ್‌ ಸರ್ಕಾರ ಏಕಾಏಕಿ ಜನಸ್ತೋಮದ ಮೇಲೆ ಗುಂಡಿನ ದಾಳಿ ನಡೆಸಿ ಸಾವಿರಾರು ಸ್ವಾತಂತ್ರ್ಯ ಸೇನಾನಿಗಳನ್ನು ಕೊಂದುಹಾಕಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು