ಪ.ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತಕ್ಕೆ 13 ಮಂದಿ ಬಲಿ;ಪ್ರಧಾನಿಯಿಂದ ಪರಿಹಾರ ಘೋಷಣೆ

ಜಲಪಾಯ್‌ಗುಡಿ: ಪಶ್ಚಿಮ ಬಂಗಾಳದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಈ ದಾರುಣ ಘಟನೆಯಲ್ಲಿ 18 ಮಂದಿ ಗಾಯಗೊಂಡಿದ್ದಾರೆ.
ದಟ್ಟ ಮಂಜಿನಿಂದಾಗಿ ಗೋಚರತೆ ಕಡಿಮೆಯಾದ ಕಾರಣ ಅಪಘಾತ ಸಂಭವಿಸಿದೆ.
ಈ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಕ್ಕೆ ಎರಡು ಲಕ್ಷ ರೂಪಾಯಿ ಪರಿಹಾರ ನಿಧಿಯನ್ನು ಘೋಷಣೆ ಮಾಡಿದ್ದಾರೆ. ಹಾಗೆಯೇ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಸಹಾಯಧನ ಘೋಷಣೆ ಮಾಡಲಾಗಿದೆ.
West Bengal: 13 people died in an accident in Dhupguri city of Jalpaiguri district last night, due to reduced visibility caused due to fog. The injured were taken to a hospital. pic.twitter.com/HHUvqCist6
— ANI (@ANI) January 20, 2021
ಪಶ್ಚಿಮ ಬಂಗಾಳದ ಜಲಪಾಯ್‌ಗುಡಿ ಜಿಲ್ಲೆಯ ಧೂಪ್‌ಗುರಿ ನಗರದಲ್ಲಿ ಅವಘಡ ಸಂಭವಿಸಿದೆ. ವಾಹನವೊಂದು ನಿಯಂತ್ರಣ ಕಳೆದುಕೊಂಡು ಟ್ರಕ್‌ಗೆ ಮುಖಾಮುಖಿ ಢಿಕ್ಕಿ ಹೊಡೆದು ವಿಭಜಕದ ಬಲ ಬದಿಗೆ ಸರಿದಿತ್ತು.
ಇದನ್ನೂ ಓದಿ: ಗಡಿ ನಿಯಂತ್ರಣ ರೇಖೆಯಲ್ಲಿ ನುಸುಳಲು ಪ್ರಯತ್ನಿಸುತ್ತಿದ್ದ ಮೂವರು ಉಗ್ರರ ಹತ್ಯೆ
ಈ ಸಂದರ್ಭದಲ್ಲಿ ಎದುರಿನಿಂದ ಬಂದ ಎರಡು ವಾಹನಗಳು ಬಂಡೆಕಲ್ಲು ಹೊತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಸಂದರ್ಭ ಟ್ರಕ್ ವಾಹನದ ಮೇಲೆ ಮಗುಚಿದೆ. ಎಲ್ಲ ನಾಲ್ಕು ವಾಹನಗಳು ನಜ್ಜುಗುಜ್ಜಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಘಟನೆಗೆ ಸಂತಾಪ ಸೂಚಿಸಿರುವ ಪ್ರಧಾನಿ, ಪಿಎಂ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಧನ ಸಹಾಯ ಘೋಷಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.