ಭಾನುವಾರ, ನವೆಂಬರ್ 27, 2022
26 °C

ದೆಹಲಿಯ ಜಾಮಿಯಾ ವಿವಿ ಘರ್ಷಣೆ: ಆಸ್ಪತ್ರೆಯಲ್ಲಿ ಗುಂಡು ಹಾರಿಸಿದ ವಿದ್ಯಾರ್ಥಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿಯ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬರ ಮೇಲೆ ಅದೇ ವಿಶ್ವವಿದ್ಯಾಲಯದ ಮತ್ತೊಬ್ಬ ವಿದ್ಯಾರ್ಥಿ ಗುಂಡು ಹಾರಿಸಿದ್ದಾನೆ. 

ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ಗುರುವಾರ ರಾತ್ರಿ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದರು. ಬಳಿಕ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ಘಟನೆಯಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ 26 ವರ್ಷದ ನೌಮನ್ ಚೌಧರಿ, ತಲೆಗೆ ಗಂಭೀರವಾದ ಗಾಯವಾಗಿದ್ದು, ಕೂಡಲೇ ಆತನನ್ನು ಹೋಲಿ ಫ್ಯಾಮಿಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಆರೋಗ್ಯ ವಿಚಾರಿಸಲು ಚೌಧರಿ ಸ್ನೇಹಿತ ನೌಮನ್ ಅಲಿ ಕೂಡ ಆಸ್ಪತ್ರೆಗೆ ಬಂದಿದ್ದ. 

ಈ ವಿಚಾರ ತಿಳಿದ‌ ಎದುರಾಳಿ ಗುಂಪಿನ ವಿದ್ಯಾರ್ಥಿ ಹರಿಯಾಣದ ಮೇವಾತ್‌ನ ಜಲಾಲ್ ತನ್ನ ಸ್ನೇಹಿತರೊಂದಿಗೆ ಗುಂಪು ಕಟ್ಟಿಕೊಂಡು ಆಸ್ಪತ್ರೆಯಲ್ಲಿ ದಾಳಿ ನಡೆಸಿದ್ದು, ನೌಮನ್ ಅಲಿ ಮೇಲೆ ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ ನೌಮನ್ ಅಲಿ ಹಣೆ ಭಾಗದಲ್ಲಿ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೌಮನ್ ಅಲಿ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಗುಂಡಿನ ದಾಳಿಯಿಂದಾಗಿ ಆಸ್ಪತ್ರೆಯಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಸದ್ಯದ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು